ರಾಜ್ಯ ಸುದ್ದಿಗಳು
ಮುದ್ದೇಬಿಹಾಳ:
ಇಲ್ಲಿನ ತಹಸೀಲ್ದಾರ್ ಕೆಛೇರಿಗೆ ಆಗಮಿಸಿದ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸರಕಾರ ಹಾಗೂ ಅಕ್ರಮ ದಂಧೆಕೋರರ ವಿರುದ್ಧ ಘೋಷಣೆ ಕೂಗಿ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಅಕ್ರಮಗಳನ್ನು ತಡೆಗಟ್ಟುವಂತೆ ಮನವಿ ಸಲ್ಲಿಸಿದರು.
ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಣಿಕೆ ಹಾಗೂ ಅಕ್ರಮ ಮದ್ಯ ಮಾರಾಟದ ದಂಧೆ ನಡೆಯುತ್ತಿದ್ದರೂ ಅಕ್ರಮಕ್ಕೆ ಕಡಿವಾಣ ಹಾಕಲು ಯಾವಬ್ಬ ಅಧಿಕಾರಿಯೂ ಮುಂದೆ ಬಂದು ಅಕ್ರಮಗಳನ್ನು ಕಡಿವಾಣ ಹಾಕುತ್ತಿಲ್ಲಾ. 2013ರಲ್ಲೇ ಅಕ್ರಮಗಳನ್ನು ತಡೆಗಟ್ಟಬಹುದು ಎಂಬ ವಿಶೇಷವಾದ ಅಧಿಕಾರ ಪೊಲೀಸ್ ಇಲಾಖೆಗೆ ನೀಡಿದ್ದರೂ ಸ್ಥಳೀಯ ಪೊಲೀಸ್ ಇದನ್ನು ಉಪಯೋಗಿಸುತ್ತಿಲ್ಲಾ ಎಂದು ಅವರು ಆರೋಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಭಜಂತ್ರಿ, ಮುದ್ದೇಬಿಹಾಳದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಟ ಹಾಗೂ ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ತಿಳಿಹೇಳಿದರೂ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲಾ. ಇದರ ಬಗ್ಗೆ ಆಲೋಚಿಸಿದಾಗ ಈ ಇಲ್ಲ ಅಕ್ರಮಗಳ ಹಿಂದೆ ಬಲಿಷ್ಠ ಕೈಗಳು ಕೆಲಸ ಮಾಡುತ್ತಿವೆ ಎನ್ನುವುದು ಕಂಡು ಬರುತ್ತಿದೆ. ಆದ್ದರಿಂದ ಜಿಲ್ಲಾಧಿಕಾರಿಗಳೇ ಮುದ್ದೇಬಿಹಾಳದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟಬೇಕು ಎಂದು ಅವರು ಆಗ್ರಹಿಸಿದರು.
ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕಾಸಿನಕುಂಟಿ ಮಾತನಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರಾದ ಸಂತೋಷ ಶಿವಯೋಗಿಮಠ, ಮಂಜುನಾಥ ಪೂಜಾರಿ, ತನವೀರ ಮಕಾನದಾರ, ಎಂ.ಎಂ.ಕುಂದರಗಿ, ಗೌತಮ ಹಿರೇಮಠ ಸೇರಿದಂತೆ ಇತರರಿದ್ದರು.
Be the first to comment