ಜಿಲ್ಲಾ ಸುದ್ದಿಗಳು
ಮುದ್ದೇಬಿಹಾಳ:
ತಾಲೂಕಾ ಆಡಳಿತ, ತಾಲೂಕ ಪಂಚಾಯತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ಆ.20 ರವಿವಾರದಂದು ಇಲ್ಲಿನ ತಹಸೀಲ್ದಾರ ಸಭಾ ಭವನದಲ್ಲಿ ದಿ.ಡಿ.ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಲ್.ಎಲ್.ಸನದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮುಲಾಸೌಲಭ್ಯ ಅಭಿವೃದ್ಧಿ ಸಚಿವ ಡಾ.ಎಂ.ಬಿ.ಪಾಟೀಲ್ ಮಾಡಲಿದ್ದು ಅಧ್ಯಕ್ಷತೆಯನ್ನು ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು, ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ್, ಪಿ.ಎಚ್.ಪೂಜಾರ, ಪ್ರಕಾಶ ಹುಕ್ಕೇರಿ, ಹಣಮಂತ ನಿರಾಣಿ ಆಗಮಿಸುವವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ ಎಂ.ಜಿ.ಎಂ.ಕೆ. ಪದವೀಪೂರ್ವ ಕಾಲೇಜಿನ ಪ್ರಚಾರ್ಯರಾದ ಎಸ್.ಕೆ.ಹರಣಾಳ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಲ್.ಎಲ್.ಸನದಿ ತಿಳಿಸಿದ್ದಾರೆ.
Be the first to comment