ಸಚಿವ ಮಲ್ಲಿಕಾರ್ಜುನ ವಿರುದ್ಧ ಎಫ್.ಐ.ಆರ್. ದಾಖಲಿಸಲು ಸೋಮವಾರದ ವರೆಗೆ ಘಡವು ನೀಡಿದ ಬಿಜೆಪಿ ಎಸ್.ಸಿ.ಮೋರ್ಚಾ…!!!

ವರದಿ: ಚೇತನ ಕೆಂದೂಳಿ, ಸಂಪಾದಕರು

ರಾಜ್ಯ ಸುದ್ದಿಗಳು

ಮುದ್ದೇಬಿಹಾಳ:

ಉಪೇಂದ್ರ ಅವರಂತೆ  ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ವಿರುದ್ಧ ದೂರು ಪಡೆಯುತ್ತಿಲ್ಲಾ ಹಾಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಸರ್ಕಾರದ ವಿರುದ್ದ ಧ್ವನಿ ಎತ್ತಿದ್ದು ಅವರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ರಾಜ್ಯ ಎಸ್. ಸಿ. ಮೋರ್ಚಾ ರಾಜ್ಯ ಸಂಚಾಲಕ(ಮಾಧ್ಯಮ) ಮಂಜುನಾಥ ಛಲವಾದಿ ತಿಳಿಸಿದ್ದಾರೆ.



ಈಗಾಗಲೇ ರಾಜ್ಯ ಸರಕಾರಕ್ಕೆ ಸೋಮವಾರದವರೆಗೂ ಘಡವು ನೀಡಿರುವ ನಮ್ಮ ನಾಯಕರು ರಾಜು ಸರಕಾರ ಯಾವುದೇ ಕ್ರಮಕ್ಕೆ ಮುಂದಾಗದಿದ್ದರೆ ವಿಧಾನಸೌಧದ ಎದುರು ನಿರಾಶನ ಪ್ರತಿಭಟನೆ ಮಾಡಲಾಗುತ್ತದೆ ಎಂದು ಹೇಳಿದ್ದು ಅವರಿಗೆ ನಮ್ಮ ಬೆಂಬಲವೂ ಇದೆ ಎಂದು ಅವರು ತಿಳಿಸಿದ್ದಾರೆ.

ಊರು ಇದ್ದಲ್ಲಿ ಹೊಲಗೇರಿ ಇರುತ್ತದೆ ಎಂದು ಹೇಳಿಕೆ ನೀಡಿದ್ದ ಉಪೇಂದ್ರ ಹಾಗೂ ತುಮಕುರಿನ ಶಕುಂತಲಾ ಅವರ ವಿರುದ್ಧ ಪೊಲೀಸರು ಎಫ್.ಐ.ಆರ್. ದಾಖಲಿಸುತ್ತಾರೆ ಆದರೆ ಮಲ್ಲಿಕಾರ್ಜುನ್ ಅವರ ವಿರುದ್ಧ  ಎಫ್.ಐ.ಆರ್. ಮಾಡಲು ಕಾಂಗ್ರೆಸ್ ಸರ್ಕಾರ ಬಿಡುತ್ತಿಲ್ಲಾ. ಇದರಲ್ಲಿ ರಾಜ್ಯ ಸರಕಾರ ಮಲ್ಲಿಕಾರ್ಜುನ ಅವರಿಗೆ ಬೆಂಬಲವಾಗಿ ನಿಲ್ಲುತ್ತಿದ್ದು ಕಾಂಗ್ರೆಸ್ ಸರಕಾರ ದಲಿತರ ವಿರೋಧಿ ಸರಕಾರ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.

Be the first to comment

Leave a Reply

Your email address will not be published.


*