ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಶಾಸಕರಿಂದ ಸಿಎಂಗೆ ಮನವಿ: ಕಾನೂನು ಸಲಹೆ ಪಡೆಯುವುದಾಗಿ ಸಿಎಂ ಭರವಸೆ…!!!

ಚೇತನ ಕೆಂದೂಳಿ, ಸಂಪಾದಕರು

ರಾಜ್ಯ ಸುದ್ದಿಗಳು

 

ಕಾರ್ಕಳ:

ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಪತ್ರ ಮುಖೇನ ಮನವಿ ಮಾಡಿದೆ.



ಕಾರ್ಕಳ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಶಾಸಕರ ಒಳಗೊಂಡ ನಿಯೋಗ ಸಿಎಂ ಭೇಟಿಯಲ್ಲಿ ಪಾಲ್ಗೊಂಡಿತು. ಬಳಿಕ ಮಾತನಾಡಿದ ಸುನಿಲ್ ಕುಮಾರ್‌, ‘ನಮ್ಮ ಮನವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ.


*ಜಾಹಿರಾತು*

ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ನಾನು ಕಾನೂನು ಸಲಹೆಯನ್ನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ನಮಗೆ ಭರವಸೆ ನೀಡಿದರು ಎಂದು ತಿಳಿಸಿದರು.

Be the first to comment

Leave a Reply

Your email address will not be published.


*