ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ, ಸಸ್ಯ ಶಾಮಲ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ಮಹಾಲಿಂಗೇಶ ನಾಡಗೌಡರ ಹೇಳಿಕೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

CHETAN KENDULI

2023-24ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸ್ಥಳಾವಕಾಶವುಳ್ಳ ಸುತ್ತಮುತ್ತ ಒಂದು ವರ್ಷದ ಕಾಲಾವಧಿಯಲ್ಲಿ 50 ಲಕ್ಷ ಸಸಿಗಳನ್ನು ನೆಡುವ ವಿನೂತನವಾದ ಕಾರ್ಯಕ್ರಮ ಇದಾಗಿದೆ. ಇದಕ್ಕೆ ‘ಸಸ್ಯ ಶ್ಯಾಮಲ’ ಎಂದು ಹೆಸರಿಡಲಾಗಿದೆ.

ಬಾಗಲಕೋಟೆ:ಪರಿಸರ ಇದ್ದರೆ ನಾವು. ಆದ್ದರಿಂದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಮುಖ್ಯ ಜವಾಬ್ದಾರಿಯಾಗಿದೆ ಎಂದು ಗ್ರಾ.ಪಂ ಅಧ್ಯಕ್ಷ ಮಹಾಲಿಂಗೇಶ ನಾಡಗೌಡರ ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಅರಣ್ಯಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕೆಲೂರ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ 50 ಸಸಿಗಳನ್ನು ನೆಡುವ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ‘ಸಸ್ಯ ಶ್ಯಾಮಲ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಹೆಚ್ಚು ಅರಣ್ಯ ನಾಶವಾಗುತ್ತಿರುವುದನ್ನು ಕಾಣುತ್ತಿದ್ದೇವೆ.ಅರಣ್ಯ ನಾಶವಾದಷ್ಟು ಪರಿಸರದ ಮೇಲೆ ಹೆಚ್ಚಿನ ದುಷ್ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಗಿಡ-ಮರಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡಬೇಕಿದೆ. ಇದು ನಮ್ಮೆಲ್ಲರ ಜವಾಬ್ದಾರಿ. ಪರಿಸರ ಸಂರಕ್ಷಣೆ ವಿಷಯದಲ್ಲಿ ವಿದ್ಯಾರ್ಥಿಗಳಾದ ನಿಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇದ್ದು, ಪ್ರತಿ ಮಕ್ಕಳು ಒಂದು ಗಿಡವನ್ನು ನೆಟ್ಟು ದತ್ತು ತೆಗೆದುಕೊಂಡು ಅದನ್ನು ಪೋಷಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಉಮೇಶ ಹೂಗಾರ,ಹನಮಂತ ವಡ್ಡರ,ಬಸವರಾಜ ಮಾದರ,ಪಿ.ಕೆ.ಪಿ.ಎಸ್ ಸದಸ್ಯರಾದ ವಜಿರಪ್ಪ ಪೂಜಾರ,ಈರಣ್ಣ ಬೂಧಿಹಾಳ ಶಾಲಾ ಪ್ರಭಾರ ಮುಖ್ಯಗುರುಗಳಾದ ಗ್ಯಾನಪ್ಪನವರ,ಯುವನಾಯಕ ಮುತ್ತು ನಾಡಗೌಡರ,ಶೇಖರಯ್ಯ ಮೇಟಿ ಮತ್ತು ಶಾಲಾ ಶಿಕ್ಷಕವರ್ಗ ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*