ಸ್ವಚ್ಛ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮ

ವರದಿ: ಅಮರೇಶ ಕಾಮನಕೇರಿ


ಜೀಲ್ಲಾ ಸುದ್ದಿಗಳು


ಬೀದರ, ಮಾರ್ಚ್ 03 :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೀದರ ಮಹಿಳಾ ಶಕ್ತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಾ.2ರಂದು ಬೀದರ ಶಿಶು ಅಭಿವೃದ್ಧಿ ಅಧಿಕಾರಿಗಳ ಕಚೇರಿಯಲ್ಲಿ ಸ್ವಚ್ಛ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಕಾಂತ ಕುಲಕರ್ಣಿ ಅವರು ಮಾತನಾಡಿ, ಸ್ವಚ್ಛತಾ ಭಾರತ ಅಭಿಯಾನವು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ತಂಡಗಳಿಂದ ಕೆಲಸ ಮಾಡಿದಲ್ಲಿ ಕಾರ್ಯಕ್ರಮ ಇನ್ನಷ್ಟು ಯಶಸ್ವಿಯಾಗಲಿದೆ ಎಂದರು. ಇದಕ್ಕೆ ಎಲ್ಲ ಇಲಾಖೆಗಳ ಸಹಯೋಗ ಪಡೆದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಲು ಸಾದ್ಯ ಎಂದು ಹೇಳಿದರು.
ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಚಂದ್ರಶೇಖರ ಜಾಧವ್ ಅವರು ಮಾತನಾಡಿ, ಸ್ತ್ರೀ ಶಕ್ತಿ ಸಂಘದವರ ಜೊತೆ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಬೇಕಿದೆ ಎಂದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ ಸಿಂಧೆ ಅವರು ಮಾತನಾಡಿ, ಯಾವುದೇ ಕಾರ್ಯವನ್ನು ಮನಪೂರ್ವಕವಾಗಿ ಮಾಡಬೇಕು. ಕಾಟಾಚಾರಕ್ಕೆ ಆಗಬಾರದು ಎಂದು ತಿಳಿಸಿದರು.
ಆರಾಧ್ಯ ಗ್ರಾಮೀಣ ಮತ್ತು ಶಿಕ್ಷಣ ಅಭಿವೃದ್ಧಿ ಸಂಸ್ಥೆಯ ಡಾ.ಜೈಶಾಲಿನಿ ಅವರು ಮಾತನಾಡಿದರು. ಬಳಿಕ ಮಹಿಳಾ ಕಲ್ಯಾಣ ಅಧಿಕಾರಿ ಶಾರದಾ ಮಾಳಗೆ ಅವರು ಎಲ್ಲ ಸಿಬ್ಬಂದಿಯೊಂದಿಗೆ ಸಂವಹನ ಕಾರ್ಯಕ್ರಮ ನಡೆಸಿಕೊಟ್ಟರು. ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಸ್ವಚ್ಛತಾ ಕಾರ್ಯಕ್ರಮದ ಪ್ರತಿಜ್ಞೆ ಬೋಧಿಸಿದರು. ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕರು ಕಾರ್ಯಕ್ರಮದಲ್ಲಿದ್ದರು. ಅಂಗನವಾಡಿ ಶಿಕ್ಷಕಿ ಶಾಂತಮ್ಮ ಅವರು ಪ್ರಾರ್ಥನೆ ಗೀತೆ ಹಾಡಿದರು. ಮಹಿಳಾ ಶಕ್ತಿ ಕೇಂದ್ರದ ಸಂಯೋಜಕರಾದ ಗೀತಾಂಜಲಿ ವಂದಿಸಿದರು.

Be the first to comment

Leave a Reply

Your email address will not be published.


*