ದೈಹಿಕ ಹಾಗೂ ಮಾನಸಿಕ ಅಭಿವೃದ್ದಿಯೊಂದಿಗೆ ಸಾಮಾಜಿಕ ಕಳಕಳಿ ಮೂಡಿಸಲಾಗುತ್ತದೆ : ಇಸ್ಮಾಯಿಲ್ ಎಲಿಗಾರ್

ಹರಪನಹಳ್ಳಿ : – ಎನ್.ಎಸ್.ಎಸ್ ಶಿಬಿರದಿಂದ ರಾಷ್ಟೀಯತೆ, ಭಾವೈಕ್ಯತೆ, ಸಹಬಾಳ್ವೆ, ನಾಯಕತ್ವ ಗುಣ ಬೆಳೆಯುತ್ತದೆ. ಇದರಿಂದ ಯುವಕರಲ್ಲಿ ಸೇವಾ ಮನೋಭಾವದ ಜತೆಗೆ ವೈಜ್ಞಾನಿಕತೆಯೂ ರೂಪಗೊಳ್ಳಲು ಸಹಕಾರಿಯಾಗುತ್ತದೆ ಎಂದು ನಿವೃತ್ತ ಶಿಕ್ಷಕರು, ಸಾಹಿತಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷರಾದ ಇಸ್ಮಾಯಿಲ್ ಎಲಿಗಾರ ಹೇಳಿದರು.

ತಾಲ್ಲೂಕಿನ ನಜೀರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿ ಶಾಲೆಯ ಆವರಣದಲ್ಲಿ ಆಯೋಜಿಸಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಎನ್.ಎಸ್.ಎಸ್‌ನಲ್ಲಿ ತೊಡಗಿಕೊಳ್ಳುವುದರಿಂದ ಜೀವನದಲ್ಲಿ ಶಿಸ್ತು, ಹಾಗೂ ಸೇವಾ ಮನೋಭಾವ ಮೈಗೂಡಿಸಿಕೊಳ್ಳಲು ಸಾದ್ಯ ಎಂದು ತಿಳಿಸಿದರು.

ಗ್ರಾಮೀಣ ಭಾಗದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿವೆ. ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಅಭಿವೃದ್ದಿಯೊಂದಿಗೆ ಸಾಮಾಜಿಕ ಕಳಕಳಿ ಮೂಡಿಸುವುದರ ಮೂಲಕ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಎನ್.ಎಸ್.ಎಸ್ ಶಿಬಿರ ಸ್ಪೂರ್ತಿದಾಯಕ ಎಂದರು.

ವಿಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಲು ಎನ್‌ಎಸ್‌ಎಸ್‌ ಶಿಬಿರ ಸಹಕಾರಿಯಾಗಿದೆ. ರಾಷ್ಟ್ರಪ್ರೇಮ, ದೇಶಭಕ್ತಿ ಬೆಳೆಯುತ್ತದೆ. ವೈಜ್ಞಾನಿಕ ಚಿಂತನೆಗಳ ಕುರಿತು ಚರ್ಚಿಸಬಹುದು. ಯುವ ಜನತೆ ದಾರಿ ತಪ್ಪದಂತೆ ಮಾರ್ಗದರ್ಶನ ನೀಡುತ್ತದೆ. ವಿದ್ಯಾರ್ಥಿಗಳು ದೇಶದ ಆರ್ಥಿಕ ಭದ್ರತೆ ಕುರಿತು ವಿಶ್ಲೇಷಣೆ ಮಾಡುವ ಎಲ್ಲಾ ಅವಕಾಶಗಳನ್ನು ಈ ವಿಶೇಷ ಶಿಬಿರ ಕಲ್ಪಿಸುತ್ತದೆ. ಇದನ್ನು ಯುವ ಜನತೆ ಸದ್ಭಳಕ್ಕೆ ಮಾಡಿಕೊಂಡರೆ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸಿ.ಬಿ ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆ ಎನ್ನುವುದು ಭಾರತ ಸರ್ಕಾರದಿಂದ ಪ್ರಾಯೋಜಿತವಾದ ಸಾರ್ವಜನಿಕ ಸೇವಾ ಸಂಸ್ಥೆ ಇದರ ಉದ್ದೇಶ ಭಾರತೀ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಾರ್ವಜನಿಕ ಸೇವೆಯ ಮೂಲಕ ಅಭಿವೃದ್ದಿಗೊಳಿಸುವುದಾಗಿದೆ ಎಂದು ಹೇಳಿದರು.

ಮಹಾತ್ಮ ಗಾಂಧೀಜಿಯವರು ಭಾರತ ದೇಶದಲ್ಲಿ ಗ್ರಾಮ ಸ್ವರಾಜ್ಯದ ಕನಸನ್ನು ಕಂಡವರು ಅದರ ಪ್ರತಿಫಲವೇ ರಾಷ್ಟ್ರೀಯ ಸೇವಾ ಯೋಜನೆ ರೂಪಗೊಂಡಿದೆ ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ, ಶ್ರಮದಾನ, ಪ್ರಗತಿಪರ ಚಿಂತನೆ, ಶೈಕ್ಷಣಿಕ ಸಾಂಸ್ಕೃತಿಕ ಚಟುವಟಿಕೆಗಳು, ಮಕ್ಕಳ ಮತ್ತು ಮಹಿಳಾ ಜಾಗೃತಿ, ಹಾಗೂ ರಾಷ್ಟಿಯ ಜಾಗೃತಿ ಮೂಡಿಸುವುದಾಗಿದೆ ಎಂದರು.

 

ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್.ಶಿಬಿರಗಳು ಜೀವನ ಕೌಶಲ್ಯಗಳನ್ನು ಕಲಿಸುತ್ತದೆ. ಅದನ್ನು ಹಳ್ಳಿಯಲ್ಲಿ ಗಮನಿಸಬಹುದು. ಬುದ್ಧ ಬಸವ ಗಾಂಧೀಜಿಯವರ ಹಾದಿಯಲ್ಲಿ ನಡೆದರೆ ಕಲ್ಯಾಣ ರಾಷ್ಟ್ರ ಕಟ್ಟುವುದರಲ್ಲಿ ಸಂಶಯವಿಲ್ಲ. ಆ ದಿಶೆಯಲ್ಲಿ ನಾವೆಲ್ಲರೂ ಮುಂದೆ ಸಾಗಬೇಕಾಗಿರುವುದರಿಂದ ವಿದ್ಯಾರ್ಥಿಗಳು ಸಾಮಾಜಿಕ ಮೌಲ್ಯಗಳನ್ನು ಶಿಬಿರದ ಮೂಲಕ ಕಲಿಯುವುದರ ಜೊತೆಗೆ ಗ್ರಾಮ ನೈರ್ಮಲ್ಯತೆ ಮತ್ತು ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿದರು.

ಬೆಣ್ಣಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ತುಕ್ಕೇಶಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿ ಪ್ರಸ್ತುತ ಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ, ಸೌಹಾರ್ದತೆ, ಪರಸ್ಪರ ಅರ್ಥೈಸಿಕೊಳ್ಳುವುದು, ಗೌರವಿಸುವುದು ಮುಂತಾದ ಮೌಲ್ಯಗಳನ್ನು ತಿಳಿಸಿಕೊಡುವ ಅಗತ್ಯವಿದೆ ಹಾಗಾಗಿ ಈ ಎನ್.ಎಸ್.ಎಸ್ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಮಾಡುವ ತರಬೇತಿ ಕೇಂದ್ರಗಳಾಗಿವೆ ಎಂದು ತಿಳಿಸಿದರು.

ಎನ್.ಎಸ್.ಎಸ್ ಶಿಬಿರಾಧಿಕಾರಿಯಾದ ಶಾಂತಮೂರ್ತಿ ಮಾತನಾಡಿ ಬದುಕಿನಲ್ಲಿ ಸರಳತೆ, ಸಹೃದಯತೆ, ಪರಸ್ಪರ ಪ್ರೀತಿ-ವಿಶ್ವಾಸ, ಸಹಕಾರ ಸಂಸ್ಕಾರಗಳು ಅತ್ಯಂತ ಅವಶ್ಯವಾಗಿವೆ ಎನ್.ಎಸ್.ಎಸ್ ಶಿಬಿರಗಳು ವಿದ್ಯಾರ್ಥಿಗಳಿಗೆ ಬದುಕಿನ ಸವಾಲುಗಳನ್ನು, ಸಮಸ್ಯೆಗಳನ್ನು ಎದುರಿಸುವ ಸಾಮಾರ್ಥ್ಯವನ್ನು ಕಲಿಸಿಕೊಡುವುದರ ಜೊತೆಗೆ ಉತ್ತಮ ನಾಗರಿಕರನ್ನಾಗಿ ರೂಪಿಸುತ್ತದೆ ಎಂದು ಹೇಳಿದರು.

ಈ ಸಂದಭರ್ದದಲ್ಲಿ ಸ.ಕಿ.ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಟಿ.ಧನಂಜಯ ಮಾತನಾಡಿದರು, ಬೆಣ್ಣಿಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯರಾದ ಜಯಮ್ಮ, ಪಂಪಾಪತಿ, ಮಂಜುನಾಥ, ಲೋಲೇಶ್ವರ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಭೀಮಪ್ಪ, ಶಿಬಿರಾಧಿಕಾರಿಯಾದ ಶಾಂತಮೂರ್ತಿ, ಉಪನ್ಯಾಸಕರಾದ ನಾರಾಯಣಸ್ವಾಮಿ, ವೀರೂಪಾಕ್ಷ ಗೌಡ್ರು, ಜಿ.ಎಸ್ ಸುರೇಶ್, ಹರಿಶ್ಚಂದ್ರನಾಯ್ಕ್, ನಿಂಗಜ್ಜ ಬಣಕಾರ್, ಯಮುನಪ್ಪ, ನಾಗರಾಜ್, ಶಿವರಾಜ್, ಮಂಜುನಾಥ್ ಮಾಳ್ಗಿ, ಹಾಲಪ್ಪ ಊರಿನ ಗ್ರಾಮಸ್ಥರು ಹಾಗೂ ಕಾಲೇಜಿನ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Be the first to comment

Leave a Reply

Your email address will not be published.


*