ರಾಜ್ಯ ಬಜೆಟನಲ್ಲಿ ಯಾವ ಜನಾಂಗಕ್ಕೆ ಎಷ್ಟು ಅನುದಾನ ಇಲ್ಲಿದೆ ವಿವರ

ವರದಿ: ಅಮರೇಶ ಕಾಮನಕೇರಿ


ರಾಜ್ಯ ಸುದ್ದಿಗಳು

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರು ಹಾಗೂ ಮಕ್ಕಳ ಅಭಿವೃದ್ಧಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಈ ಬಾರಿಯ ಬಜೆಟ್‌ನಲ್ಲಿ ನೀಡಿರುವ ಪ್ರಮುಖ ಕೊಡುಗೆಗಳು ಇಲ್ಲಿವೆ ನೋಡಿ.

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಅಡಿ 26,930 ಕೋಟಿ ರೂ. ಅನುದಾನ ನಿಗದಿ. ಇದು ನಿಯಮಾನುಸಾರ ಹಂಚಿಕೆ ಮಾಡಬೇಕಾದ ಮೊತ್ತಕ್ಕಿಂತ ಹೆಚ್ಚು.

  • ಪ್ರತಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ, ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಒಂದು ಲಕ್ಷ ರೂ. ನಗದು ಪ್ರಶಸ್ತಿ ನೀಡಲು ಕ್ರಮ. 60 ಲಕ್ಷ ರೂ. ಅನುದಾನ.

  • ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ. ಅನುದಾನ.

  • ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಗಮಗಳಿಗೆ 125 ಕೋಟಿ ರೂ. ಅನುದಾನ.

  • ಉಪ್ಪಾರ ಅಭಿವೃದ್ಧಿ ನಿಗಮಕ್ಕೆ 10 ಕೋಟಿ

  • ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ 25 ಕೋಟಿ

  • ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 50 ಕೋಟಿ

  • ಆರ್ಯವೈಶ್ಯ ಅಭಿವೃದ್ಧಿ ನಿಮಗಕ್ಕೆ 10 ಕೋಟಿ

  • ಕುಂಬಾರ ಸಮುದಾಯದವರ ಅಭಿವೃದ್ಧಿಗಾಗಿ 20 ಕೋಟಿ

  • ಗೊಲ್ಲ ಸಮುದಾಯ ಅಭಿವೃದ್ಧಿಗಾಗಿ 10 ಕೋಟಿ

  • ಇ-ವಾಣಿಜ್ಯ ಉತ್ಪನ್ನಗಳನ್ನು ಸರಬರಾಜು ಮಾಡುವ ಯುವಕರಿಗೆ ಬೈಕ್ ಕೊಳ್ಳಲು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾವಿರ ಯುವಕರಿಗೆ ತಲಾ 25,000 ರೂ.ಗಳಂತೆ 2.5 ಕೋಟಿ ರೂ. ಆರ್ಥಿಕ ನೆರವು

  • ಕ್ರೈಸ್ತ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ.

  • ಅಪೂರ್ಣ ಹಂತದ ಎರಡು ಲಕ್ಷ ಮನೆಗಳನ್ನು ಪೂರ್ಣಗೊಳಿಸಿ, ವಸತಿರಹಿತರಿಗೆ ಹಂಚಿಕೆ ಮಾಡಲು 2500 ಕೋಟಿ ರೂ.

  • ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.

  • ನಬಾರ್ಡ್ ಸಹಯೋಗದಲ್ಲಿ 758 ಕೋಟಿ ರೂ. ವೆಚ್ಚದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ.

  • ಪ್ರತಿ ತಿಂಗಳಲ್ಲಿ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನ, “ಸಂಭ್ರಮ ಶನಿವಾರ” ಆಚರಣೆ.

  • ಶಿಕ್ಷಕರ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು “ಶಿಕ್ಷಕ ಮಿತ್ರ” ಎಂಬ ಮೊಬೈಲ್ ಆ್ಯಪ್ ಅಭಿವೃದ್ಧಿ.

  • ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐ.ಐ.ಟಿ. ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು 10 ಕೋಟಿ ರೂ. ಅನುದಾನ.

  • ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ತಲಾ ಐದು ಕೋಟಿ ರೂ. ವೆಚ್ಚದಲ್ಲಿ ಜಿಯೋಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ.

  • ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ ಆಯೋಜನೆ.

  • ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ / ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಂತ ಹಂತವಾಗಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆ ವಿಸ್ತರಣೆ.

  • ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ.

  • ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ ವಿಭಾಗಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಿ ಉತ್ಕøಷ್ಟತಾ ಕೇಂದ್ರಗಳನ್ನಾಗಿ (Centre of Excellence) ಅಭಿವೃದ್ಧಿಪಡಿಸಲು ಐದು ಕೋಟಿ ರೂ. ಅನುದಾನ.

  • ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ 3 ಕೋಟಿ ರೂ. ವೆಚ್ಚದಲ್ಲಿ ಸಿಮ್ಯುಲೇಷನ್ ಲ್ಯಾಬ್ ಮತ್ತು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್ ಸ್ಥಾಪನೆ.

  • ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್ ಸಂಸ್ಥೆಗಳ ಸ್ಥಾಪನೆ.

  • ವೈದ್ಯಕೀಯ, ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು ಕೇಂದ್ರೀಕೃತ ಉದ್ಯೋಗ ಕೋಶ ಸ್ಥಾಪನೆ.

  • ಆಯವ್ಯಯದಲ್ಲಿ ಮಹಿಳೆಯರ ಕಲ್ಯಾಣಕ್ಕಾಗಿ 37,783 ಕೋಟಿ ರೂ.ಗಳ 953 ಕಾರ್ಯಕ್ರಮಗಳ ನಿಗದಿ. ಇದು ಒಟ್ಟಾರೆ ಆಯವ್ಯಯ ಗಾತ್ರದ ಶೇ.15.88 ರಷ್ಟು.

  • ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಮಕ್ಕಳ ಆಯವ್ಯಯ ಮಂಡನೆ. ರಾಜ್ಯದಲ್ಲಿರುವ 18 ವರ್ಷದ ಕೆಳಗಿರುವ ಎಲ್ಲಾ ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆ ಅಡಕ. 2020-21ನೇ ಸಾಲಿನ ಆಯವ್ಯಯದಲ್ಲಿ 36,340 ಕೋಟಿ ರೂ.ಗಳ 279 ಕಾರ್ಯಕ್ರಮಗಳ ಪ್ರಸ್ತಾಪ. ಇದು ಒಟ್ಟಾರೆ ಆಯವ್ಯಯ ಗಾತ್ರದ 15.28 ರಷ್ಟು.

  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಕಾರ್ಯಕ್ರಮಗಳನ್ನು ಪಾರದರ್ಶಕವಾಗಿ ಮಹಿಳೆಯರಿಗೆ ತಲುಪಿಸಲು ಮಹಿಳಾ ಸುರಕ್ಷತಾ ಪೋರ್ಟಲ್ ಪ್ರಾರಂಭ.

  • ಸ್ತ್ರೀಶಕ್ತಿ ಸ್ವ-ಸಹಾಯ ಸಂಘದ ಉತ್ಪನ್ನಗಳನ್ನು ಸರ್ಕಾರದ ಇಲಾಖೆಗಳಲ್ಲಿ ಅವಶ್ಯಕತೆಗನುಸಾರ ಖರೀದಿಸಲು ಕ್ರಮ.

  • ರಾಜ್ಯದ 500 ಅಂಧ ವಿದ್ಯಾರ್ಥಿಗಳಿಗೆ ತಲಾ 25,000 ರೂ.ಗಳ ಮೊತ್ತದ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್ ಹಾಗೂ ವಾಕಿಂಗ್ ಸ್ಟಿಕ್‍ಗಳನ್ನೊಳಗೊಂಡ ಕಿಟ್ ವಿತರಣೆ. 1.25 ಕೋಟಿ ರೂ. ಅನುದಾನ.

  • “ಮುಖ್ಯಮಂತ್ರಿಗಳ ಆರೋಗ್ಯ ಸುರಕ್ಷಾ” ಯೋಜನೆಯಡಿಯಲ್ಲಿ ಒಂದು ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ಅನುಮೋದಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು “ಉಚಿತ ಪ್ರಿಪೇಯ್ಡ್ ಹೆಲ್ತ್ ಕಾರ್ಡ್” ವಿತರಣೆ.

  • “ವನಿತಾ ಸಂಗಾತಿ” ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ. ಅನುದಾನ.

(ಮೇಲ್ಕಂಡ ಗ್ರಾಫಿಕ್ಸ್ ಇಮೇಜ್ ಮೂಲ: ಸಿಎಂ ಆಫ್ ಕರ್ನಾಟಕ ಟ್ವಿಟರ್ ಖಾತೆ

Be the first to comment

Leave a Reply

Your email address will not be published.


*