ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ

ಬೆಂಗಳೂರು, ಮೇ 13:“ಲೋಕಸಭಾ ಚುನಾವಣೆ ಆದ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ. ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಹೀಗೆ ಉತ್ತರಿಸಿದರು:

“ಮೋದಿ ಅವರು ಉದ್ದವ್ ಠಾಕ್ರೆ ಬಗ್ಗೆ ಏಕೆ ಮಾತನಾಡಿದರು. ಅವರಿಗೆ ಶಕ್ತಿ ಇದೆ ಎನ್ನುವ ಕಾರಣಕ್ಕೆ. ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ. ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ತಿರುಗೇಟು ನೀಡಿದರು.

ಕರ್ನಾಟಕದಲ್ಲಿ ಶಿಂಧೆ ತರದವರು ಇದ್ದಾರೆಯೇ ಎಂದು ಕೇಳಿದಾಗ, “ಅವರಲ್ಲಿ ಆ ತರದವರು ಇರಬಹುದು. ನಮ್ಮಲ್ಲಿ ಇಲ್ಲ. ನಮಗೆ ಯಾರ ಭಯವೂ ಇಲ್ಲ. ಅವರ ಸರ್ಕಾರ ಬೀಳುತ್ತದೆ, ಪಕ್ಷ ಬಿಟ್ಟು ಬಂದವರು ಮರಳಿ ಹೋಗುತ್ತಾರೆ ಎನ್ನುವ ಭಯದಿಂದ ಹೀಗೆ ಹೇಳುತ್ತಿದ್ದಾರೆ” ಎಂದರು.

ಪರಿಷತ್ ಚುನಾವಣೆ: ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತೇವೆ

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದೆ. ಪಕ್ಷದ ಆರು ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ನಮಗಿದೆ. ಪದವೀಧರರ ಹಾಗೂ ಶಿಕ್ಷಕರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅರಿವಿದೆ. ಇವರ ಬದುಕಿನ ಬಗ್ಗೆ ನಮಗೆ ಕಾಳಜಿ ಇರುವ ಕಾರಣ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಇವರ ಸಮಸ್ಯೆಗಳ ನಿವಾರಣೆಗೆ ಕೆಲಸ ಮಾಡಿದ್ದೇವೆ.

ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೂತನ ಶಿಕ್ಷಣ ನೀತಿ ಸೇರಿದಂತೆ ಇತರೇ ಸಮಸ್ಯೆಗಳ ನಿವಾರಣೆ ಬಗ್ಗೆ ಹೇಳಿದ್ದೇವೆ. ನಿರುದ್ಯೋಗಿ ಪದವೀಧರರ ಸಮಸ್ಯೆ ನಿವಾರಣೆಗೆ ನಾವು ಕೆಲಸ ಮಾಡಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಈ ವರ್ಗಕ್ಕೆ ಏನಾದರೂ ಸಹಾಯ ಮಾಡಿದೆಯೇ? ಇಲ್ಲ. ಒಟ್ಟಿನಲ್ಲಿ ಇವರ ಕೆಲಸಗಳು ಆಗಬೇಕು. ಜವಾಬ್ದಾರಿ ನಮ್ಮದು. ಶಿಕ್ಷಕರು, ಪದವೀಧರರ ಮೇಲೆ ನಮಗೆ ವಿಶ್ವಾಸವಿದೆ. ” ಎಂದು ಹೇಳಿದರು.

LOGO
Logo

Be the first to comment

Leave a Reply

Your email address will not be published.


*