ರಾಜ್ಯ ಸುದ್ದಿಗಳು
ಬೆಂಗಳೂರು : ಭಾರತದಲ್ಲಿ ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಇರಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ವಿಧಾನಸೌಧದಲ್ಲಿ ಸಂವಿಧಾನದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಸಂವಿಧಾನ ರಚನೆಯಾದ ಹತ್ತು ವರ್ಷಗಳಲ್ಲಿ ತಳಸಮುದಾಯಗಳಿಗೆ ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದೊರೆಯುತ್ತದೆ ಎಂದು ಅಂಬೇಡ್ಕರ್ ಅವರು ಭಾವಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ವಿಷಾದಿಸಿದರು. ಹತ್ತು ವರ್ಷಗಳಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದಲಿತ ಸಮುದಾಯಕ್ಕೆ ದೊರೆಯಲಿಲ್ಲ . “ಅಂಬೇಡ್ಕರ್ ಅವರೇ ಒಂದು ಕಡೆ, ಎಲ್ಲಿಯವರೆಗೆ ಈ ದೇಶದಲ್ಲಿ ಜಾತಿಯ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೆ ಮೀಸಲಾತಿಯ ಅಗತ್ಯವೂ ಇದೆ ಎಂದು ಹೇಳಿದ್ದಾರೆ ಎಂದು ನುಡಿದರು.
Be the first to comment