ರಾಯಚೂರು, ಜು.5- ಸರಳ ಸಜ್ಜನಿಕೆ ಉತ್ತಮ ಆಡಳಿತ ನಡೆಸಿದ ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ ನಾಯಕ ಅವರ ವರ್ಗಾವಣೆಯನ್ನು ಮಾಜಿ ರೈಲ್ವೆ ಬೋರ್ಡ್ ಸದಸ್ಯ ಡಾ. ಬಾಬುರಾವ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರು ಜನಪ್ರತಿನಿದಿನಗಳು ರೈತರು ಜನಸಾಮಾನ್ಯರು ಮತ್ತು ಸಂಘಟನೆ ಮುಖಂಡರು ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಎಲ್ಲರಿಗೂ ಸಮಾನ
ರೀತಿಯಲ್ಲಿ ಕಾಣುತ್ತಿದ್ದರು. ಚಂದ್ರಶೇಖರ ನಾಯಕ ಅವರ ಆಡಳಿತದಲ್ಲಿ ಜಿಲ್ಲಾಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕವಲಯದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿತ್ತು. ತಮ್ಮ ಮೂರು ವರ್ಷಗಳ ಆಡಳಿತ ಅವಧಿಯಲ್ಲಿ ಉತ್ತಮ ಆಡಳಿತ ನಡೆಸುವುದರ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿ ಚಿಂತನೆ ಹೊಂದಿದ್ದರು. ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರ ಆಡಳಿತ ಅವಧಿಯಲ್ಲಿ ಮಹತ್ವಕಾಂಕ್ಷಿ ಯೋಜನೆಯಡಿ ರಾಯಚೂರು ಜಿಲ್ಲೆ ಸಮಗ್ರ ಅಭಿವೃದ್ಧಿಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಅಖಿಲ ಭಾರತ ಮಹತ್ವಾಕಾಂಕ್ಷೆಯ ಜಿಲ್ಲಾ ಡೆಲ್ಟಾ ಶ್ರೇಯಾಂಕ ಪ್ರಕಟಿಸಿದ ಕೇಂದ್ರದ ನೀತಿ ಆಯೋಗದ ಸಮೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ದೊರೆತಿದೆ. ಅವರ ಅವಧಿಯಲ್ಲಿ ಶೈಕ್ಷಣಿಕ, ಆರೋಗ್ಯ, ಆರ್ಥಿಕ, ಕೃಷಿ, ಮತ್ತು ಕೌಶಲ್ಯ ಅಭಿವೃದ್ಧಿಯಲ್ಲಿ ರಾಯಚೂರು ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದರು. ದೇಶದ ಒಟ್ಟು 112
ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರು ಜಿಲ್ಲೆ ಸಮಗ್ರ ಸಾಧನೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ಬಗ್ಗೆ ಚಿಂತನೆ ಹೊಂದಿದ ಜಿಲ್ಲಾಧಿಕಾರಿ ವರ್ಗಾವಣೆ ಬೇಸರ ತಂದಿದೆ ಎಂದರು. ಒಂದಡೆ ಎಸ್ಪಿ ವರ್ಗಾವಣೆ ಬೆನ್ನಲೇ ಡಿಸಿ ವರ್ಗಾವಣೆ ಜಿಲ್ಲೆ ಅಭಿವೃದ್ಧಿಗೆ ಹಿನ್ನಡೆ ಆಗುವ ಸಾಧ್ಯತೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Be the first to comment