ಕಾವೇರಿ ನೀರು ಬಿಡುಗಡೆ ಕುರಿತ ಸಭೆ : ಆಹಾರ ಸಚಿವರು ಭಾಗಿ

ಬೆಂಗಳೂರು (ಕೃಷ್ಣ)12 : ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಇಂದು ಕಾವೇರಿ ನದಿ ನೀರು ಬಿಡುಗಡೆ ಬಗ್ಗೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ *ಕೆಹೆಚ್.ಮುನಿಯಪ್ಪ* ನವರು ಭಾಗವಹಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌, ಸಚಿವರಾದ ಹೆಚ್.ಸಿ. ಮಹದೇವಪ್ಪ, ಚೆಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್‌,ರಾಜಣ್ಣ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

LOGO
Logo

Be the first to comment

Leave a Reply

Your email address will not be published.


*