ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಿದ ಬಜೆಟ್ : ಯಶ್ ಪಾಲ್ ಸುವರ್ಣ

ಬೆಂಗಳೂರ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿರ್ಮಲ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕ ವ್ಯವಸ್ಥೆಗೆ ಹೊಸಚೈತನ್ಯ ತುಂಬುವ ಮೂಲಕ ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಿದೆ ಎಂದು ಶಾಸಕ ಯಶಪಾಲ್ ಸುವರ್ಣ ಹೇಳಿದರು.

ಮಹಿಳಾ ಸಬಲೀಕರಣಕ್ಕೆ 3 ಲಕ್ಷ ಕೋಟಿ ಅನುದಾನ ಮೀಸಲಿರಿಸಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಸಹಕಾರ ಕ್ಷೇತ್ರವನ್ನು ಸಧೃಡಗೊಳಿಸುವ ನಿಟ್ಟಿನಲ್ಲಿ ರಾಷ್ಟೀಯ ಸಹಕಾರ ನೀತಿಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರದ ಮುಂದಾಗಿದೆ.

ಆದಾಯ ತೆರಿಗೆ ಮಿತಿ ಹೆಚ್ಚಳ, ಕೃಷಿ ಅಭಿವೃದ್ದಿಗೆ ಪೂರಕ ಕಾರ್ಯಕ್ರಮ, ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, 12 ಹೊಸ ಇಂಡಸ್ಟ್ರಿಯಲ್ ಪಾರ್ಕ್ ನಿರ್ಮಾಣದ ಮೂಲಕ ಕೈಗಾರಿಕೆಗಳಿಗೆ ಪ್ರೋತ್ಸಾಹ, ಮುದ್ರಾ ಯೋಜನೆಯ ಸಾಲದ ಮಿತಿಯನ್ನು 20 ಲಕ್ಷಕ್ಕೆ ಏರಿಕೆ ಮಾಡುವ ಮೂಲಕ ದೇಶದ ಆರ್ಥಿಕತೆಯ ಸಮಗ್ರ ಪ್ರಗತಿಗೆ ಹೊಸ ಭಾಷ್ಯ  ಈ ಬಜೆಟ್ ಬರೆದಿದೆ.

ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದ ಆರ್ಥಿಕತೆಯೂ ವಿಶ್ವದ ಪ್ರಬಲ ಆರ್ಥಿಕ ಶಕ್ತಿಯಾಗಲು ಸಂಕಲ್ಪಕ್ಕೆ ಈ ಬಾರಿಯ ಬಜೆಟ್ ಪೂರಕವಾಗಲಿದೆ.

LOGO
Logo

 

Be the first to comment

Leave a Reply

Your email address will not be published.


*