SSLC, PUC ,ವಿದ್ಯಾರ್ಥಿಗಳು ಇಷ್ಟಪಟ್ಟರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ ಕಾಲೇಜನಲ್ಲಿ ಪ್ರವೇಶ ಪಡೆಯಬಹುದು

ಪ್ರತಿ ವರ್ಷ ಕನಿಷ್ಠ ಒಂದು ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಮೊಟಕುಗೊಳಿಸುತ್ತಾರೆ. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಅಂತ ಈ ವಿಶೇಷ ಸೌಲಭ್ಯ ನೀಡಲಾಗಿದೆ. ರೆಗ್ಯುಲರ್ ವಿದ್ಯಾರ್ಥಿಗೆ ಸಿಗುವ ಎಲ್ಲ ಅನೂಕೂಲ ಈ ವಿದ್ಯಾರ್ಥಿಗಳಿಗೆ ಸಿಗುತ್ತೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

 

ಬೆಂಗಳೂರು: ದ್ವಿತೀಯ ಪಿಯು ಉತ್ತೀರ್ಣರಾದ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌ ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅಗತ್ಯವಾದ ತರಬೇತಿ ನೀಡಲು ರಾಜ್ಯ ಸರ್ಕಾರ ₹12 ಕೋಟಿ ಬಿಡುಗಡೆ ಮಾಡಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ನೀಟ್‌, ಜೆಇಇ ಮತ್ತಿತರ ಪ್ರವೇಶ ಪರೀಕ್ಷೆಗಳಿಗೆ ಪ್ರತ್ಯೇಕ ಶುಲ್ಕ ಪಾವತಿಸಿ ಕಾಲೇಜು ಹಂತದಲ್ಲೇ ತರಬೇತಿ ಪಡೆಯುತ್ತಾರೆ. ಇಲ್ಲವೇ ಖಾಸಗಿ ಕೋಚಿಂಗ್‌ ಸೆಂಟರ್‌ಗಳಲ್ಲಿ ಸಿದ್ಧತೆ ನಡೆಸುತ್ತಾರೆ. ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೂ ತರಬೇತಿ ದೊರಕಬೇಕು ಎನ್ನುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ವರ್ಷ ಕನಿಷ್ಠ 20 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕುರಿತು ಬಜೆಟ್‌ನಲ್ಲೇ ಘೋಷಣೆ ಮಾಡಿದ್ದರು ಎಂದು ಮಾಹಿತಿ ನೀಡಿದರು.

ಎಸ್ಎಸ್​ಎಲ್​ಸಿ (SSLC)​​​ ಮತ್ತು ದ್ವಿತೀಯ ಪಿಯುಸಿಯಲ್ಲಿ (2nd PUC) ಅನುತ್ತೀರ್ಣರಾದ ವಿದ್ಯಾರ್ಥಿಗಳು ಇಷ್ಟಪಟ್ಟರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಅದೇ ತರಗತಿಗಳಿಗೆ ದಾಖಲಾಗಿ ವ್ಯಾಸಂಗ ಮಾಡಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ  ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್ಎಸ್​ಎಲ್​ಸಿ​​​ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ ವಿದ್ಯಾರ್ಥಿಗಳು ಇಷ್ಟಪಟ್ಟರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ, ಪಿಯು ಕಾಲೇಜಿನಲ್ಲಿ ಅದೇ ತರಗತಿಗಳಿಗೆ ಮತ್ತೆ ದಾಖಲಾಗಿ ವ್ಯಾಸಂಗ ಮಾಡಬಹುದು ಎಂದರು.

ಸರ್ಕಾರ ಹಣ ಬಿಡುಗಡೆ ಮಾಡಿದೆ. ತರಬೇತಿ ಸಂಸ್ಥೆಗಳನ್ನು ಆಯ್ಕೆ ಮಾಡಲಾಗುತ್ತಿದೆ. ಹೆಚ್ಚಿನ ವಿದ್ಯಾರ್ಥಿಗಳಿಂದ ಬೇಡಿಕೆ ಬಂದರೆ ಕಾಲೇಜು ಹಂತಗಳಲ್ಲೇ ಕಿರು ಪರೀಕ್ಷೆ ನಡೆಸಿ, ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.

ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ವಿಳಂಬವಾಗಿದ್ದ 13,500 ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ, ಅತಿಥಿ ಶಿಕ್ಷಕರನ್ನು ಬಳಸಿಕೊಳ್ಳಲಾಗಿದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ 950 ಕೋಟಿ ಘೋಷಣೆ ಮಾಡಿತ್ತು. ಆದರೆ, ನೀಡಿದ ಮೊತ್ತ ಕಡಿಮೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ 2023–24ರಲ್ಲಿ ₹109 ಕೋಟಿ, ಈ ಸಾಲಿನಲ್ಲಿ ₹291 ಕೋಟಿ ನೀಡಲಾಗಿದೆ. 8,311 ಕೊಠಡಿಗಳಲ್ಲಿ ನನೆಗುದಿಗೆ ಬಿದ್ದಿದ್ದ 316 ಕೊಠಡಿಗಳ ನಿರ್ಮಾಣಕ್ಕೆ ಆಯಾ ಶಾಸಕರಿಂದ ಕ್ರಿಯಾ ಯೋಜನೆ ತರಿಸಿಕೊಳ್ಳಲಾಗಿದೆ. ಮಳೆಯಿಂದ ಹಾನಿಯಾದ ಕಟ್ಟಡಗಳನ್ನು ತಕ್ಷಣ ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪ್ರತಿ ವರ್ಷ ಕನಿಷ್ಠ ಒಂದು ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಮೊಟಕುಗೊಳಿಸುತ್ತಾರೆ. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಅಂತ ಈ ವಿಶೇಷ ಸೌಲಭ್ಯ ನೀಡಲಾಗಿದೆ. ರೆಗ್ಯುಲರ್ ವಿದ್ಯಾರ್ಥಿಗೆ ಸಿಗುವ ಎಲ್ಲ ಅನೂಕೂಲ ಈ ವಿದ್ಯಾರ್ಥಿಗಳಿಗೆ ಸಿಗುತ್ತೆ ಎಂದು ಹೇಳಿದರು.

ನನ್ನ ಇಲಾಖೆ ಅಡಿಯಲ್ಲಿ 46 ಸಾವಿರ ಶಾಲೆಗಳು‌ ಹಾಗೂ ಕಾಲೇಜು ಬರುತ್ತವೆ. ಇದರಲ್ಲಿ 15 ಸಾವಿರ ಅನುದಾನಿತ ಶಾಲೆಗಳಿವೆ. 42 ಸಾವಿರ ಅತಿಥಿ ಶಿಕ್ಷಕರು ನೇಮಕ ಮಾಡಿದ್ದೇವೆ. 13,500 ಸಾವಿರ ಖಾಯಂ ಶಿಕ್ಷಕರ ನೇಮಕ ಮಾಡಿದ್ದೇವೆ. 11,400 ಸಾವಿರ ಜನರಿಗೆ ಖಾಯಂ ನೇಮಾತಿಯಾಗಿದೆ. 53 ಸಾವಿರ ಖಾಯಂ ಶಿಕ್ಷಕರ ನೇಮಕಾತಿಯಾಗಬೇಕಿದೆ. ಕಳೆದ 9 ವರ್ಷಗಳಲ್ಲಿ ಅನುದಾನಿತ ಶಾಲೆಗೆ ಒಬ್ಬ ಶಿಕ್ಷರನ್ನು ನೇಮಕ ಮಾಡಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಅನುದಾನಿತ ಶಾಲೆಗಳಿಗೆ 5 ಸಾವಿರ ಶಿಕ್ಷಕರ‌ ನೇಮಕಾತಿ ಆಗಲಿದೆ ಎಂದ ಹೇಳಿದರು

ಈ ವರ್ಷ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಅಂಗನವಾಡಿಗಳಲ್ಲೂ ಎಲ್‌ಕೆಜಿ, ಯುಕೆಜಿ ಆರಂಭಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಇದರಿಂದ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ ಎಂದರು.

Be the first to comment

Leave a Reply

Your email address will not be published.


*