ಬೆಂಗಳೂರು ಗ್ರಾಮಾಂತರ ಜಿಲ್ಲೆ: “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ

ದೇವನಹಳ್ಳಿ 15 (ಬೆಂಗಳೂರು ಗ್ರಾಮಾಂತರ) :: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ “78ನೇ ಸ್ವಾತಂತ್ರ್ಯೋತ್ಸವ” ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರು ಹಾಗೂ ಗಣ್ಯರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಕ್ರೀಡಾಂಗಣ ಅಭಿವೃದ್ಧಿಗೆ ಅನುದಾನ

ಜಿಲ್ಲಾ ಕ್ರೀಡಾಂಗಣಕ್ಕಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಭಿವೃದ್ಧಿ ಮಂಡಳಿ ವತಿಯಿಂದ 20.24 ಎಕರೆ ಭೂಮಿಯನ್ನು ದೊಡ್ಡಬಳ್ಳಾಪುರ ತಾಲ್ಲೂಕು ಆದಿ ನಾರಾಯಣ ಹೊಸಹಳ್ಳಿ ಗ್ರಾಮದಲ್ಲಿ ಹಂಚಿಕೆ ಮಾಡಲಾಗಿದ್ದು, ಜಿಲ್ಲಾ ಕ್ರೀಡಾಂಗಣದ ಕಾಮಗಾರಿಯ ಪೂಜೆಯನ್ನು 2024 ಅಕ್ಟೋಬರ್ 02 ರ ಗಾಂಧಿ ಜಯಂತಿಯಂದು ನೆರವೇರಿಸಲಾಗುವುದು.
ದೇವನಹಳ್ಳಿ ಪಟ್ಟಣದ ಸೂಲಿಬೆಲೆ ಮುಖ್ಯ ರಸ್ತೆಯ ದೇವನಹಳ್ಳಿ ಟೌನ್ ಕ್ರೀಡಾಂಗಣಕ್ಕೆ ವಿಶೇಷ ಅನುದಾನದಡಿಯಲ್ಲಿ ಕ್ರೀಡಾಂಗಣ ಅಭಿವೃದ್ಧಿಗಾಗಿ 50 ಲಕ್ಷ ರೂ. ಮತ್ತು ದೇವನಹಳ್ಳಿ ಸರ್ಕಾರ ಆಸ್ಪತ್ರೆ ಹಿಂಭಾಗದ ದೇವನಹಳ್ಳಿ ತಾಲ್ಲೂಕು ಕ್ರೀಡಾಂಗಣಕ್ಕೆ ಸ್ಥಳೀಯ ಪ್ರದೇಶಭಿವೃದ್ಧಿ ಯೋಜನೆಯಡಿಯಲ್ಲಿ 01 ಕೋಟಿ ರೂ. ಅನುದಾನವನ್ನು ಅಭಿವೃದ್ಧಿಗೆ ನೀಡಲಾಗುವುದು.

ಅಂಗಾಂಗ ದಾನ ಮಾಡಿದ ಕುಟುಂಬಗಳಿಗೆ ಸನ್ಮಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅಂಗಾಂಗ ದಾನ ಮಾಡಿದ ಜಿಲ್ಲೆಯ 15 ಜನರ ಕುಟುಂಬಗಳಿಗೆ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರ ಸಹಿಯುಳ್ಳ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ

2024 ರ ಸೆಪ್ಟೆಂಬರ್ 13 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವು ದೇವನಹಳ್ಳಿ ಟೌನ್ ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಇದರ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಹಾಗೂ ಗಣ್ಯರು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ’ದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದರು.

ನರೇಗಾ ಕೈಪಿಡಿ ಬಿಡುಗಡೆ

ಮಹಾತ್ಮಗಾಂಧಿ ನರೇಗಾ ಯೋಜನೆಯ ಸಂಪೂರ್ಣ ಮಾಹಿತಿಯುಳ್ಳ ಕೈಪಿಡಿ ಹಾಗೂ ಭಿತ್ತಿ ಪತ್ರ ಅನಾವರಣ ಮಾಡಲಾಯಿತು.

ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳಿಸಿದ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ ಸುಧಾಕರ್, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ(ಬಯಪ)ಅಧ್ಯಕ್ಷರಾದ ಶಾಂತಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಕೆ ಬಾಬಾ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

LOGO
Logo

Be the first to comment

Leave a Reply

Your email address will not be published.


*