ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದೊಡ್ಡ ವಿವಾದವನ್ನೇ ಹುಟ್ಟುಹಾಕಿದ್ದ ಮುಡಾ ನಿವೇಶನದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೊಸ ಅಪ್ಡೇಟ್ ಹೊರಬಿದ್ದಿದೆ. ಮುಡಾ ಸೈಟು ಹಂಚಿಕೆ ಕೇಸ್ನಲ್ಲಿ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
ಇದು ಸಿದ್ದರಾಮಯ್ಯ ಅವರ ಕುರ್ಚಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಈ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ. ಪರಮೇಶ್ವರ್, ನಾವು ಕಾನೂನಾತ್ಮಕವಾಗಿ ಹೋರಾಟ ಮಾಡ್ತೇವೆ ಎಂದಿದ್ದಾರೆ.
ಇನ್ನು ಈ ಕುರಿತು ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ, ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ.
ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಸಿಎಂ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯ ನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದರು.
Be the first to comment