ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಕೈ ಪಾಳಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅದರಂತೆ ಇಂದು(ಭಾನುವಾರ) ಮಳವಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ ನಾಲಿಗೆ ಹರಿಬಿಟ್ಟಿದ್ದಾರೆ.
ಮಂಡ್ಯ, ಆ.18: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಕೈ ಪಾಳಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅದರಂತೆ ಇಂದು(ಭಾನುವಾರ) ಮಳವಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ(PM Narendraswamy) ನಾಲಿಗೆ ಹರಿಬಿಟ್ಟಿದ್ದಾರೆ. ವಾಗ್ದಾಳಿ ಬರದಲ್ಲಿ ಅಸಬಂದ್ದ ಪದ ಬಳಸಿದ್ದು, ‘ಸುಪ್ರೀಂ ಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ, ಮುಟ್ಟಾಳನ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟೀಸ್ ಕೊಡ್ತೀರಲ್ಲಪ್ಪ. ರಾಜ್ಯಪಾಲ ಆಗೋಕೆ ನೀನು ನಾಲಾಯಕ್ ಎಂದಿದ್ದಾರೆ.
ಕುಮಾರಸ್ವಾಮಿ ವಿರುದ್ದ ಚಾರ್ಜ್ ಶೀಟ್ ಸಲ್ಲಿಸೋಕೆ ಲೋಕಾಯುಕ್ತ ಕೇಳಿದ್ದಾರೆ. ಆದ್ರೆ, 8 ತಿಂಗಳಿಂದ ಹಾಗೇ ಕುಳಿತಿದ್ದಿಯಲ್ಲಪ್ಪ. ಮಹಾನ್ ಇಂಡಸ್ಟ್ರಿಯಲಿಸ್ಟ್ ನಿರಾಣೆದು 108 ಹಗರಣವಿದೆ. ಶಶಿಕಲಾ ಜೊಲ್ಲೆ ವಿಚಾರದಲ್ಲಿ ಜೊಲ್ಲು ಸುರಿಸಿಕೊಂಡು ಕುಳ್ತಿದ್ದೀಯಲ್ಲಪ್ಪ. ಘನವೆತ್ತ ರಾಜ್ಯಪಾಲ ನಿನಗೆ ತಾಕತ್ತಿದ್ದರೇ ಅವರ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ಕೊಡು. ನಮ್ಮ ಸಿದ್ದರಾಮಯ್ಯ ತಪ್ಪು ಮಾಡಿದ್ರೆ ಅವರ ಜೊತೆ ನಮಗೂ ಶಿಕ್ಷೆಕೊಡು. ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಹೇಡಿಗಳಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
Be the first to comment