ಅಪರ ಜಿಲ್ಲಾಧಿಕಾರಿ ಹೆಚ್. ಅಮರೇಶ್ ಅವರಿಗೆ ಮನವಿ ಪತ್ರ ನೀಡಿದ ಸಚಿವ ಮುನಿಯಪ್ಪ ಮತ್ತು ಶಾಸಕರು.
ದೇವನಹಳ್ಳಿ.ಅ 19 :: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಇಂದು ದೇವನಹಳ್ಳಿಯ ಚಪ್ಪರದ ಕಲ್ಲು ಗ್ರಾಮ ದಿಂದ ಜಿಲ್ಲಾಧಿಕಾರಿ ಕಛೇರಿಯ ವರೆಗೂ ಪಾದಯಾತ್ರೆ ಮೂಲಕ
ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರ ನೇತೃತ್ವದಲ್ಲಿಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ಮೂಲಕ ತೆರಳಿ ಪ್ರತಿಭಟನೆಯನ್ನು ನಡೆಸಿದರು.
ನಂತರ ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಅಮರೇಶ್ ಅವರಿಗೆ ಮನವಿ ಪತ್ರವನ್ನು ನೀಡಿದರು
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳ ಬಹುಮತವನ್ನು ನೀಡಿದ್ದು ನಮ್ಮ ಸರ್ಕಾರ ವನ್ನು ರಾಜ್ಯಪಾಲರ ಮೂಲಕ ತೆಗೆಯಲು ಪ್ರಯತ್ನ ನಡೆಸುತ್ತಿರುವ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲಾ ನಮ್ಮ ಸರ್ಕಾರ ಸುಭದ್ರ ವಾಗಿರುತ್ತದೆ ನಾವು ಕಾನೂನಿನ ಮೂಲಕ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದರು
ಈ ಸಂದರ್ಭದಲ್ಲಿ ಹೊಸಕೋಟೆ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರವಣಪ್ಪ,ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಸಿಆರ್.ಗೌಡ, ಬಯ್ಯಪ್ಪಾ ಅಧ್ಯಕ್ಷರಾದ ಶಾಂತಕುಮಾರ್, ದೇವನಹಳ್ಳಿ ತಾಲ್ಲೂಕು ಕಾಂಗ್ರಸ್ ಘಟಕದ ಅಧ್ಯಕ್ಷರಾದ ಪ್ರಸಣ್ಣಕುಮಾರ್ , ರಂಗಪ್ಪ, ರಾಮಚಂದ್ರಪ್ಪ ,ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ, ತಾಲ್ಲೂಕು ಗ್ಯಾರಂಟಿ ಸಮಿತಿಯ ಜಗನ್ನಾಥ,ರವಿಕುಮಾರ್,ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾಂಗ್ರೆಸ್ ಯುವ ಘಟಕದ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
Be the first to comment