ಬಸವಸಾಗರ ಜಲಾಶಯ ಭರ್ತಿ :ಜಿಲ್ಲಾ ಉಸ್ತುವಾರಿ ಸಚಿವರಿಂದ ಬಾಗಿನ ಅರ್ಪಣೆ

 

ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವ ಸಾಗರ ಜಲಾಶಯಕ್ಕೆ ಸಚಿವ ರಿಂದ ಬಾಗಿನ ಅರ್ಪಣೆ ಮಾಡಲಾಯಿತು

ಈ ಬಾರಿಯೂ ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ ರೈತರಲ್ಲಿ ಮತ್ತು ಜನರಲ್ಲಿ ಆತಂಕವನ್ನು ದೂರ ಮಾಡಿದ್ದಾಳೆ. ಕುಡಿಯುವ ನೀರಿಗಾಗಿ, ರೈತರ ಜಮೀನುಗಳಿಗೆ ನೀರಾವರಿಗಾಗಿ ನೀರನ್ನು ಕಾಲುವೆಗಳ ಮೂಲಕ ಹರಿಸಿಲಾಗುತ್ತಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ ಅವರು ಅಭಿಪ್ರಾಯಪಟ್ಟರು.

ನಾರಾಯಣಪುರದ ಬಸವಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆ ಜಿಲ್ಲೆಯ ಉಸ್ತುವಾರಿ ಸಚಿವರು ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೆಬಿಹಾಳ ಶಾಸಕ ಸಿ.ಎಸ್ ನಾಡಗೌಡ , ಲಿಂಗಸೂಗೂರ ಎಂ.ಎಲ್.ಸಿ ಶರಣಗೌಡ ಭಯ್ಯಾಪುರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ ,ಕೆ.ಬಿ.ಜೆ.ಎನ್.ಎಲ್ ಮುಖ್ಯ ಅಭಿಯಂತರರಾದ ಆರ್. ಮಂಜುನಾಥ, ಅಧೀಕ್ಷಕ ಅಭಿಯಂತರ ರಮೇಶ ಜಿ ರಾಠೋಡ್, ಕಾರ್ಯ ನಿರ್ವಾಹಕ ಅಭಿಯಂತರರಾದ ಸುರೇಂದ್ರ ರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ, ವಿಜಯ್ ಅರಳಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

LOGO

Be the first to comment

Leave a Reply

Your email address will not be published.


*