ಗಣೇಶ ಮಹೋತ್ಸವ ಸಂದರ್ಭದಲ್ಲಿ ಪರಿಸರ ಸ್ನೇಹಿ ಗಣೇಶ ಬಳಸುಲು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ : ಸಚಿವ ಖಂಡ್ರೆ

 

ಬೆಂಗಳೂರ : ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪಿ.ಓ.ಪಿ. ಗಣೇಶ ಮೂರ್ತಿಗಳ ಸಾಗಾಟ, ಮಾರಾಟ, ದಾಸ್ತಾನು ಮತ್ತು ವಿಸರ್ಜನೆ ಬದಲಿಗೆ ಪರಿಸರ ಸ್ನೇಹಿ ಗಣಪತಿ ಮತ್ತು ಹಸಿರು ಪಟಾಕಿ ಬಳಕೆ ಕುರಿತಂತೆ ರಾಜ್ಯಾದ್ಯಂತ ಕ್ರಮ ಕೈಗೊಳ್ಳುವ ಕುರಿತಂತೆ ಉನ್ನತ ಮಟ್ಟದ ಸಭೆ ನಡೆಯಿತು.

ಈ ಸಭೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಭಾಗಿಯಾಗಿದ್ದರು.

LOGO

Be the first to comment

Leave a Reply

Your email address will not be published.


*