ಯಾದಗಿರಿ: ಸುರಪುರ ತಾಲೂಕಿನ ಏವೂರ ಗ್ರಾಮಪಂಚಾಯಿತಿಯ 2021-24 ರ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಬಂದಿರುವ ಅನುದಾನ ಹಾಗೂ ನೀರು ನಿರ್ವಹಣೆ, ಕರ ವಸೂಲಿ ಮಾಡಿರುವ ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಯಾವುದೇ ಕ್ರಿಯಾ ಯೋಜನೆ ಪಟ್ಟಿಯನ್ನು ಸಿದ್ಧಪಡಿಸಬೇಕಾದರೆ ಸದಸ್ಯರ ಸಭೆ ಮಾಡಿ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಆದರೆ ತಮ್ಮ ತಮ್ಮ ಅನುಕೂಲಕ್ಕೆ ತಕ್ಕಂತೆ ಕ್ರಿಯಾ ಯೋಜನೆ ಪಟ್ಟಿಯನ್ನು ಸಿದ್ದಪಡಿಸಿದ್ದು ಗ್ರಾಮ ಪಂಚಾಯಿತಿಯ ಕೆಲ ಸದಸ್ಯರ ಜೊತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಜೆ ಇ ಅವರು ಕೂಡಾ ಈ ಭ್ರಷ್ಟಾಚಾರದಲ್ಲಿ ಕೈ ಜೋಡಿಸಿದ್ದು ಕಂಡುಬರುತ್ತದೆ.
ಕಾಮಗಾರಿಗಳನ್ನು ಅರ್ಧಂಬರ್ಧ ಮಾಡಿ ಬಿಲ್ ಪಾವತಿ ಮಾಡಿಕೊಂಡಿರುತ್ತಾರೆ 15ನೇ ಹಣಕಾಸಿನ ಲಕ್ಷಾಂತರ ರೂಪಾಯಿ ಹಣವನ್ನು ದುರುಪಯೋಗ ಮಾಡಿಕೊಂಡು ಸರ್ಕಾರಕ್ಕೆ ಮೋಸ ಮಾಡಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಜೆ ಇ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾದ ಸದಸ್ಯರ ಸದಸ್ಯತ್ವ ರದ್ದು ಮಾಡಬೇಕು ಒಂದು ವೇಳೆ ಯಾವುದೇ ರೀತಿಯ ಕ್ರಮ ಕೈಗೊಳ್ಳದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಯಾದಗಿರಿ ಜಿಲ್ಲಾ ಪಂಚಾಯತ ಕಾರ್ಯಾಲಯ ಮುಂದೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕೆಂಭಾವಿ ಹೋಬಳಿ ಘಟಕ ಸಂಚಾಲಕರಾದ ಮಂಜುನಾಥ ಕೊಂಬಿನ ಆಗ್ರಾಹಿಸಿದ್ದಾರೆ.
Be the first to comment