ಅಂಬೇಡ್ಕರ್ ದೀಕ್ಷಾ ಭೂಮಿ ಪ್ರವಾಸಕ್ಕೆ ಅರ್ಜಿ ಆಹ್ವಾನ

 

ಲಿಂಗಸೂಗೂರು ವರದಿ ಸೆಪ್ಟೆಂಬರ್ 03.

ಲಿಂಗಸುಗೂರು 24 /25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರ ರಾಜ್ಯದ ನಾಗಪುರದ ದೀಕ್ಷಾ ಭೂಮಿಯಲ್ಲಿ ನಡೆಯುವ ಧಮ್ಮ ಚಕ್ರ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಭೇಟಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಡಿ ರಾಜಕುಮಾರ್
ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಪ್ರಯಾಣಿಸಲು ವ್ಯವಸ್ಥೆ ಮಾಡಲಾಗಿದೆ. ಆಸಕ್ತಿಯುಳ್ಳ ಬಿ ಪಿ ಎಲ್ ಕಾರ್ಡ್ ಹೊಂದಿರುವ ಡಾ. ಬಿ.ಆರ್ ಅಂಬೇಡ್ಕರ್ ಅನುಯಾಯಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಮೂಲಕ ಸರ್ಕಾರದ ಆದೇಶದಂತೆ ಕೊನೆಯ ದಿನಾಂಕ 05 ,9 , 2024 ರ ಸಂಜೆ 5:30 ಕ್ಕೆ ವಿಸ್ತರಿಸಲಾಗಿದೆ
ಅವಶ್ಯಕ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಯೋಮಿತಿ ಕನಿಷ್ಠ 18 ವರ್ಷ ಮೇಲ್ಪಟ್ಟ ಇರಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಸಮಾಜ ಕಲ್ಯಾಣ ಇಲಾಖೆಗೆ ಸಂಪರ್ಕಿಸುವಂತೆ ಡಿ ರಾಜಕುಮಾರ್ ಸಹಾಯಕ ನಿರ್ದೇಶಕರು ಗ್ರೇಡ್.1.
ಸಮಾಜ ಕಲ್ಯಾಣ ಇಲಾಖೆ ಲಿಂಗಸುಗೂರು ಅವರು ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*