ಹಾವೇರಿ ಜಿಲ್ಲೆಯ ಶಿಗ್ಗಾಂವ-ಸವಣೂರು ವಿಧಾನ ಸಭಾ ಉಪ ಚುನಾವಣೆಯ ಪ್ರಯುಕ್ತ, ಕೆಪಿಸಿಸಿ ವತಿಯಿಂದ ಆಯೋಜಿಸಲಾದ ಬೂತ್ ಸಮಿತಿ ಸದಸ್ಯರ ಸಮಾವೇಶದಲ್ಲಿ ಅರಣ್ಯ ಮತ್ತು ಪರಿಸರ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು, ಬೂತ್ ಮಟ್ಟದ ಕಾರ್ಯಕರ್ತರ ಪಾತ್ರವು ಚುನಾವಣಾ ಗೆಲುವಿನಲ್ಲಿ ಮಹತ್ವಪೂರ್ಣವಾಗಿದೆ ಎಂದು ಸೂಚಿಸಿದರು. ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಲು ಮತ್ತು ಮುಂದಿನ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬೂತ್ ಸಮಿತಿಗಳು ತಳಮಟ್ಟದಲ್ಲಿ ನಿರಂತರ ಶ್ರಮಿಸಬೇಕು ಎಂದು ಕರೆ ನೀಡಿದರು.
Be the first to comment