ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಮತ್ತೊಂದು‌ ಸಂಘಟನೆ ಕಟ್ಟಲು ನಿರ್ಧಾರ!

 

ಬಿಜೆಪಿಯಲ್ಲಿ ಬಿ ಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣ ವಿರುದ್ಧ ತೊಡೆ ತಟ್ಟಿರೋ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಇದೀಗ ಮತ್ತೊಂದು ಸಂಘಟನೆಗೆ ಮುಂದಾಗಿದ್ದಾರೆ. ವಿಜಯಪುರದಲ್ಲಿ ಬೆಂಬಲಿಗರೊಂದಿಗೆ ಸಭೆ ಸೇರಿ ಚರ್ಚಿಸಿ ಅಂತಿಮವಾಗಿ ಹಿಂದುತ್ವದ ಹೆಸರಿನಲ್ಲಿ ಸಂಘಟನೆ ಮಾಡೋದಾಗಿ ಘೋಷಿಸಿದ್ದಾರೆ.

ಹೌದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪನವರ ನೇತೃತ್ವದಲ್ಲಿ ಸಭೆ ನಡೆಯಿತು. ವಿಜಯಪುರ ತಾಲೂಕಿನ ಮಹಲ್ ಐನಾಪುರ ಗ್ರಾಮದಲ್ಲಿರೋ ಹುಲಜಂತಿ ಮಠದ ಆವರಣದಲ್ಲಿ ನಡೆದ ಬೆಂಬಲಿಗರೊಂದಿಗೆ ಸಭೆ ನಡೆಸಿ ಮತ್ತೊಂದು ಹಿಂದುತ್ವದ ಹೆಸರಿನಲ್ಲಿ ಸಂಘಟನೆ ಮಾಡುವ ಉದ್ದೇಶ ದಿಂದ ಬೆಂಬಲಿಗರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ತೀರ್ಮಾನ, ಅಭಿಪ್ರಾಯ ಸಂಗ್ರಹದ ಬಳಿಕ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಘೋಷಿಸಿದರು ಸಭೆಯಲ್ಲಿ ಬಿಜೆಪಿ ಪಕ್ಷದಲ್ಲಿ ಬಿ ಎಸ್ ಯಡಿಯೂರಪ್ಪ ಅವರಿಂದ ಕೆಎಸ್ ಈಶ್ವರಪ್ಪರಿಗಾದ ಅನ್ಯಾಯ ಹಾಗೂ ಈ ಹಿಂದೆ ರಾಯಣ್ಣ ಬ್ರಿಗೇಡ್ ಮಾಡಿದಾಗ ಅದರಿಂದ ಹಿಂದೆ ಸರಿದಿದ್ದೇ ಇಂದಿನ ತಮ್ಮ ರಾಜಕೀಯ ಸ್ಥಿತಿಗೆ ಕಾರಣ ಎಂದು ಬೆಂಬಲಿಗರು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಂದಿನ ಸಿಎಂ ಈಶ್ವರಪ್ಪ ಅಜೆಂಡ್ ದೊಂದಿಗೆ ಸಭೆ ಆರಂಭವಾಯ್ತು. ಜಮಖಂಡಿ ತಾಲೂಕಿನ ಜಕನೂರು ಗ್ರಾಮದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಗೆ ಮರಳಿ ಕರೆತಂದು ಮುಖ್ಯಮಂತ್ರಿ ಮಾಡುವುದಾಗಿ ಘೋಷಣೆ ಮಾಡುವ ಮೂಲಕ ಮತ್ತೆ ಬಿಜೆಪಿಯಲ್ಲಿ ಭಿನ್ನಮತದ ಬಾವುಟ ಹಾರಿಸಿದ್ದಾರೆ. ಇದೇ ಅಸ್ತ್ರವನ್ನಾಗಿಸಿಕೊಂಡು ಈಶ್ವರಪ್ಪ ಬೆಂಬಲಿಗರು ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಈಶ್ವರಪ್ಪ ಹಾಗೂ ಬಿಜೆಪಿ ಪಕ್ಷ ಮರಳಿ ಈಶ್ವರಪ್ಪ ಅವರನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಇಲ್ಲವಾದರೆ ಈಶ್ವರಪ್ಪ ಅವರು ತಮ್ಮ ಶಕ್ತಿ ಪ್ರದರ್ಶನ ಮೂಲಕ ರಾಯಣ್ಣ ಬ್ರಿಗೇಡ್ ಮಾದರಿಯಲ್ಲಿ ಸಂಘಟನೆಗೆ ಮುಂದಾಗಬೇಕು. ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಆರ್ ಸಿಬಿ ಹೆಸರಿನಲ್ಲಿ ಸಂಘಟನೆಗೆ ಈಶ್ವರಪ್ಪ ಅವರಿಗೆ ಸಲಹೆ ನೀಡಿದ್ದು, ಬೆಂಬಲಿಸುವುದಾಗಿ ಹೇಳಿದ್ದಾರೆ.

ಇನ್ನೂ ಬೆಂಬಲಿಗರ ಸಭೆಯಲ್ಲಿ ಆರ್ ಸಿಬಿ ಹೆಸರಿನಲ್ಲಿ ಮುಂದಿನ ಹೋರಾಟ ರೂಪಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದರು. ಆದ್ರೆ ಕೆ ಎಸ್ ಈಶ್ವರಪ್ಪ ತಮ್ಮ ಭಾಷಣದಲ್ಲಿ ಅಕ್ಟೋಬರ್ 20ರಂದು ಬಾಗಲಕೋಟೆಯಲ್ಲಿ ಮತ್ತೊಂದು ಸುತ್ತಿನ ರಾಜ್ಯಮಟ್ಟದ ಬೆಂಬಲಿಗರೊಂದಿಗೆ ಸಭೆ ನಡೆಸಿ ಅಂತಿಮವಾಗಿ ಸಂಘಟನೆಗೆ ಯಾವ ಹೆಸರಿಡಬೇಕು ಅನ್ನೋ ನಿರ್ಧಾರ ಜೊತೆಗೆ ಎಲ್ಲಾ ಸಮಾಜದ ಸ್ವಾಮೀಜಿಗಳ ನೇತೃತ್ವದಲ್ಲಿ ಬಾಗಲಕೋಟೆಯಲ್ಲಿ ಸಭೆಗೆ ನಿರ್ಧರಿಸಿದ್ದಾರೆ. ಪಕ್ಷಾತೀತವಾಗಿ ಹಿಂದುತ್ವದ ಅಜೆಂಡಾದೊಂದಿಗೆ ಹೋರಾಟ ಮಾಡಲು ಈಶ್ವರಪ್ಪ ಸಂಕಲ್ಪ ತೊಟ್ಟಿದ್ದಾರೆ.

ಸಭೆಯಲ್ಲಿ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ದಾವಣಗೆರೆಯಿಂದ ಬೆಂಬಲಿಗರು ಆಗಮಿಸಿದ್ದರು, ಹಿಂದುತ್ವದ ನೆಲೆಗಟ್ಟಿನಲ್ಲಿ ಎಲ್ಲಾ ಸಮಾಜದಲ್ಲಿನ ಶೋಷಿತರ ಬಡವರಿಗಾಗಿ ಹೋರಾಟ ಮಾಡುವುದಾಗಿ ಸಭೆಯಲ್ಲಿ ಈಶ್ವರಪ್ಪ ಘೋಷಿಸಿದರು. ರಾಯಣ್ಣ ಬ್ರಿಗೇಡ್ ಬಳಿಕ ಇದೀಗ ರಾಜಕೀಯ ಸಂಧ್ಯಾಕಾಲದಲ್ಲಿ ಈಶ್ವರಪ್ಪ ಮತ್ತೊಂದು ಸಂಘಟನೆಗೆ ಮುಂದಾಗಿದ್ದಾರೆ. ಸಭೆಯಲ್ಲಿ ಹುಲಜಂತಿ ಮಹಾರಾಜರು, ಮಖಣಾಪುರ ಸ್ವಾಮೀಜಿ,

ಕೆ ಕಾಂತೇಶ್, ಈರಣ್ಣ ಹಳೇಗೌಡರ, ರಾಜು ಬಿರಾದಾರ,‌ ಆಸಂಗೆಪ್ಪ ನಕ್ಕರಗುಂದಿ, ಸೇರಿದಂತೆ ಹಲವು ಸಮಾಜದ ಮುಖಂಡರು ಭಾಗಿಯಾಗಿದ್ದರು.ಬಿಜೆಪಿಯಲ್ಲಿ ಬಿ ಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ದ ತೊಡೆ ತಟ್ಟಿರೋ ಈಶ್ವರಪ್ಪ ಇದೀಗ ಮತ್ತೊಂದು ಸಂಘಟನೆಗೆ ಮುಂದಾಗಿದ್ದಾರೆ. ಮುಂಬರುವ ದಿನಗಳಲ್ಲಿ ಈ ಸಂಘಟನೆ ಉಲಯಾವ ತಿರುವ ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೊಡೋಣ.

Be the first to comment

Leave a Reply

Your email address will not be published.


*