ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ

 

ಲಿಂಗಸೂಗೂರು..
ಆಡಳಿತಾಧಿಕಾರಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘದ ರಾಜ್ಯ ಸಮಿತಿಸಭೆಯಲ್ಲಿ ಸರಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧರಿಸಲಾಗಿದ್ದು ಅದರಂತೆ ಲಿಂಗಸೂಗೂರು ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಲಿಂಗಸುಗೂರು ಸಹಾಯಕ ಆಯುಕ್ತರಿಗೆ ಅವರ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸೆ.23 ರಂದು ಸೋಮವಾರ ಸಂಜೆ ಸರಕಾರಕ್ಕೆ ಮನವಿ ಸಲ್ಲಿಸಿದರು.
ಮೊಬೈಲ್ ಆಪ್ ಮೂಲಕ ಕೆಲಸಮಾಡಲು ಸೂಕ್ತ ವ್ಯವಸ್ಥೆಗಳನ್ನು ಕಲ್ಪಸದ ಕಾರಣ ಹಲವು ಸಮಸ್ಯೆಗಳಾಗುತ್ತಿರುವ ಬಗ್ಗೆ ಕಚೇರಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರಕಾರದ ಮುಂದೆ ಸಮಿತಿ ಇಟ್ಟಿದ್ದು ಈ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಗ್ರಾಮ ಆಡಳಿತ ಅಧಿಕಾರಿಗಳ ಲಿಂಗಸೂಗೂರು ತಾಲೂಕ ಅಧ್ಯಕ್ಷ ವಿನಯ ಕುಮಾರ್ ಜಿಲ್ಲಾಧ್ಯಕ್ಷ ಅಮರೇಶ ರಾಠೋಡ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕ್ಯಾತನಾಳ, ಉಪಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಲಿಂಗಸೂಗೂರು ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*