ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ಅವರ ತಾಯಿ ಶತಾಯುಷಿ ಮುನಿಯಮ್ಮ ಅವರ ನಿಧನಕ್ಕೆ ಡಿಸಿಎಂ ಸಂತಾಪ

 

ಬೆಂಗಳೂರು, ಸೆ.23:

ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ಅವರ ತಾಯಿ ಶತಾಯುಷಿ ಮುನಿಯಮ್ಮ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

ನೂರು ವರ್ಷಗಳನ್ನು ಕಂಡಿದ್ದ ಮುನಿಯಮ್ಮ ಅವರ ಬದುಕು ಹಾಗೂ ಜೀವನಾನುಭವ ನಮಗೆಲ್ಲಾ ಸ್ಪೂರ್ತಿ. ತಾಯಿಗಿಂತ ಬಂಧುವಿಲ್ಲ, ಉಪ್ಪಿಗಿಂತ ರುಚಿಯಿಲ್ಲ ಎನ್ನುವ ಮಾತಿದೆ. ಸ್ನೇಹಿತ ನಾರಾಯಣಸ್ವಾಮಿ ಅವರು ತಮ್ಮ ಕುಟುಂಬದ ಹಿರಿಯ ಜೀವವನ್ನು ಕಳೆದುಕೊಂಡಿರುವ ಸುದ್ದಿ ಕೇಳಿ ನೋವುಂಟಾಗಿದೆ. ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ.

ಸಾರ್ಥಕ ನೂರು ವರ್ಷಗಳನ್ನು ಪೂರೈಸಿರುವ ಹಿರಿಯ ಜೀವದ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*