ಶಾಸಕ `ಜನಾರ್ದನ ರೆಡ್ಡಿ’ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ : ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವು |

 

ಬಳ್ಳಾರಿ : ಶಾಸಕ ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣ ಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ಕೋರ್ಟ್‌ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು.

ಹಲವು ಬಾರಿ ಕೋರ್ಟ್‌ ಅವಕಾಶ ಕೇಳಿ ಸಲ್ಲಿಸಿದ್ದ ಮನವಿಯನ್ನು ತಳ್ಳಿ ಹಾಕಿತ್ತು. ಆದರೆ ಇದೀಗ ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಈ ಮೂಲಕ ಶಾಸಕ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಬಳ್ಳಾರಿಗೆ ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ಹೋಗಲು ಅವಕಾಶ ನೀಡುವಂತೆ ಜನಾರ್ದನ ರೆಡ್ಡಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬಳ್ಳಾರಿಗೆ ಹೋಗಲು ಇದ್ದ ನಿರ್ಬಂಧವನ್ನು ತೆರವುಗೊಳಿಸಿ ಆದೇಶ ಹೊರಡಿಸಿದೆ.

Be the first to comment

Leave a Reply

Your email address will not be published.


*