ಕೊರೊನಾ ಹಿನ್ನಲೆ : ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಎಲ್ಲಾ ಬಗೆಯ ಸಂತೆ, ಜಾತ್ರೆ, ಉತ್ಸವ, ಸಭೆ, ಸಮಾರಂಭ ನಿಷೇಧ

ವರದಿ: ಮಂಜುಳಾ ರೆಡ್ಡಿ ಬೆಂಗಳೂರು ನಗರ

ಜೀಲ್ಲಾ ಸುದ್ದಿಗಳು


ಬೆಂಗಳೂರು ಗ್ರಾಮಾಂತರ, ಮಾರ್ಚ್. 14):- ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮಾರ್ಚ್ 14ರಿಂದ 21ರವರೆಗೆ ಸಾರ್ವಜನಿಕರು ಸೇರುವಂತಹ ಎಲ್ಲಾ ತರಹದ ಸಂತೆ, ಜಾತ್ರೆ, ಉತ್ಸವ, ಸಭೆ, ಸಮಾರಂಭ ಇನ್ನಿತರ ಕಾರ್ಯಕ್ರಮಗಳನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ.

ಜಾಹೀರಾತು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಉತ್ಸವ, ಸಭೆ, ಸಮಾರಂಭ ಇನ್ನಿತರ ಜನಸಂದಣಿ ಕಾರ್ಯಕ್ರಮಗಳು, ಚಲನಚಿತ್ರ ಮಂದಿರಗಳು, ನಾಟಕ ಪ್ರದರ್ಶನಗಳು ಹಾಗೂ ಸರ್ಕಾರಿ ಸಮಾರಂಭಗಳಲ್ಲಿ ಜನದಟ್ಟಣೆಯಾಗುವಂತಹ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.

ವಿಡಿಯೋ

ಜಾಹೀರಾತು

ಜಿಲ್ಲೆಯಲ್ಲಿ ನಡೆಯುವ ಬೇಸಿಗೆ ಶಿಬಿರಗಳು, ಕ್ರೀಡಾಕೂಟಗಳು, ವಿಚಾರ ಸಂಕಿರಣ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸದಂತೆ ಸೂಚಿಸಲಾಗಿದೆ. ಮದುವೆಯನ್ನು ಹೆಚ್ಚಿನ ಜನಸಂದಣಿ ಸೇರದಂತೆ ಸರಳವಾಗಿ ನಡೆಸಲು ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಸಾರ್ವಜನಿಕರು ಕೊರೊನಾ ವೈರಸ್ ಸೋಂಕು ತಡೆಗಟ್ಟುವಲ್ಲಿ ಎಲ್ಲಾ ರೀತಿಯ ಸಹಕಾರವನ್ನು ನೀಡಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.


Be the first to comment

Leave a Reply

Your email address will not be published.


*