ಬೆಂಗಳೂರು, ಅ.7: ಭದ್ರಾವತಿ ವಿಭಾಗದ ಚೋರಡೇನಹಳ್ಳಿ ರಾಜ್ಯ ಅರಣ್ಯ ಮತ್ತು ಕಾಯಿತೊಟ್ಲು ಕಿರು ಅರಣ್ಯ ಪ್ರದೇಶಗಳನ್ನು ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಪ್ರದೇಶಕ್ಕೆ ಸೇರಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಮ್ಮತಿಸಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರಿಗೆ ವಿವರ ನೀಡಿದ ಅವರು, ಇದರ ಜೊತೆಗೆ ಶಿವಮೊಗ್ಗ ನಗರದ ಜನರ ಹಿತ ಕಾಯುವ ನಿಟ್ಟಿನಲ್ಲಿ ಶೆಟ್ಟಿಹಳ್ಳಿ ಅಭಯಾರಣ್ಯದ ಗಡಿಯ ಪರಿಷ್ಕೃತ ಪ್ರಸ್ತಾವನೆ ಪರಿಶೀಲಿಸಿ ಒಟ್ಟು 395.64 ಚದರ ಕಿಲೋ ಮೀಟರ್ ಗೆ ನಿಗದಿ ಪಡಿಸಲಾಗಿದ್ದು, ಇದಕ್ಕೆ ಮಂಡಳಿ ತನ್ನ ಅಂಗೀಕಾರ ನೀಡಿದ್ದು, ಕೇಂದ್ರೀಯ ವನ್ಯಜೀವಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.
ಇದರಿಂದ ಶಿವಮೊಗ್ಗ ಜನತೆಗೆ ಎದುರಾಗಿದ್ದ ಅರಣ್ಯ ಗಡಿ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ ಇದೆ.
Be the first to comment