ಬೆಂಗಳೂರಿನ ನಾಗರಬಾವಿಯಲ್ಲಿರುವ ಪ್ರತಿಷ್ಟಿತ ಕಾಲೇಜಾದ ಕೆಎಲ್ಇ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಎರಡು ದಿನಗಳ ಕಾಲ ಅಂತರ್ ಕಾಲೇಜು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಹಾಗೂ ವಾಣಿಜ್ಯ ಮತ್ತು ಸಾಂಸ್ಕೃತಿಕ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಮನೋಜ್ ಕುಮಾರ್ ಕೊಳ್ಳ ,
ಕೆಎಲ್ಇ ಸಂಸ್ಥೆ ಬೆಳಗಾವಿಯ ಆಡಳಿತ ಮಂಡಳಿಯ ಸದಸ್ಯರಾದ ಗೌರವಾನ್ವಿತ ಮಹಾಂತೇಶ ಎಂ ಕವಟಗಿ ಮಠ್ , ಕೆಎಲ್ಇ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರುಗಳಾದ ಎಸ್ ಐ ಮುನವಳ್ಳಿ ಹಾಗೂ ಜೆ ಎಂ ಮುನವಳ್ಳಿ ಮತ್ತು ಕೆಎಲ್ಇ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಮಲ್ಲಿಕಾರ್ಜುನಯ್ಯಾ, ಕಾಲೇಜಿನ ಪ್ರಾಂಶುಪಾಲರಾದ ಸಾಯಿ ಕರುಣಾಕರ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಎರಡು ದಿನದ ಬೃಹತ್ ಕಾರ್ಯಕ್ರಮದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು ಕಾರ್ಯಕ್ರಮದಲ್ಲಿ ಮೊದಲ ದಿನ ವಿಜ್ಞಾನ ವಿಭಾಗದ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಕ ವಿಜ್ಞಾನಕ್ಕೆ ಸಂಬಂಧಿಸಿದಂತೆ ಹತ್ತು ಹಲವು ರೀತಿಯ ವಿಭಿನ್ನ ವಸ್ತುಪ್ರದರ್ಶನವನ್ನು ಏರ್ಪಡಿಸಲಾಗಿದೆ. ವಾಣಿಜ್ಯ ವಿಭಾಗಕ್ಕೆ ಸಂಬಂಧಿಸಿದಂತೆ ಚರ್ಚಾ ಸ್ಪರ್ಧೆ, ರಸಪ್ರಶ್ನೆ, ಪ್ರಾಡಕ್ಟ್ ಲಾಂಚ್, ಪ್ರಬಂಧ ರಚನೆ, ಮಾಡೆಲ್ ಪ್ರೆಸೆಂಟೇಷನ್ ರೀತಿಯ ಆಕರ್ಷಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಎರಡನೇ ದಿನದ ಕಾರ್ಯಕ್ರಮವನ್ನು ಸಾಂಸ್ಕ್ರತಿಕ ಉತ್ಸವ ಎನ್ನುವ ವಿಭಿನ್ನ ಆಲೋಚನೆಯ ಮುಖಾಂತರ ವೇದಿಕೆ ಮೇಲೆ ನೃತ್ಯ, ಭಾವಗೀತೆ, ಜನಪದ ಗೀತೆ, ಹಾಡುಗಾರಿಕೆ, ವಾದ್ಯ ನುಡಿಸುವಿಕೆ, ನಟನೆ, ಚಿತ್ರಕಲೆ, ಫೇಸ್ ಪೇಂಟಿಂಗ್, ರಂಗೋಲಿ, ಮೆಹಂದಿ ಹಾಗೂ ಪೆನ್ಸಿಲ್ ಸ್ಕೆಚ್ ನಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು.
Be the first to comment