ಕೊರೊನಾ ವೈರಸ್ ಬಗ್ಗೆ ಅತಂಕ ಬೇಡ : ಜಿಲ್ಲಾಡಳಿತದಿಂದ ಸಕಲ ಕ್ರಮ- ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ

ವರದಿ:ಮಹದೇವಸ್ವಾಮಿ ಉಮ್ಮತೂರು

ಜೀಲ್ಲಾ ಸುದ್ದಿಗಳು


ಕೊವೈಡ-19 (ಕೊರೊನಾ ವೈರಸ್) ಸಂಬಂಧ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಜಿಲ್ಲೆಯ ಜನತೆ ಯಾವುದೇ ಅತಂಕ ಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19 ಕೊರೊನಾ ವೈರಸ್ ಸೋಂಕು ವಿಷಯ ಕುರಿತು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿಗಳು ಈ ವಿಷಯ ತಿಳಿಸಿದರು.

ಜಾಹೀರಾತು

ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಸೋಂಕು ಸಂಬಂಧ ಯಾವುದೇ ಪ್ರಕರಣ ವರದಿಯಾಗಿಲ್ಲ. ಅಂತರರಾಜ್ಯ ಚೆಕ್ ಪೋಸ್ಟ್‍ಗಳಲ್ಲಿ ವಿಶೇಷ ಗಮನ ಹರಿಸಲಾಗಿದೆ. ತೀವ್ರ ಜ್ವರ, ಕೆಮ್ಮು, ಶೀತದಿಂದ ಬಳಲುತ್ತಿರುವ ಲಕ್ಷಣವಿದ್ದಲ್ಲಿ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾಡರ್ïಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರï. ರವಿ ಅವರು ತಿಳಿಸಿದರು.

ಕೊರೊನಾ ಆತಂಕ ಇರುವುದರಿಂದ ಜಿಲ್ಲೆಯ ಜನರು ವಿದೇಶಕ್ಕೆ ಹೋಗುವುದನ್ನು ಮುಂದೂಡಬೇಕು. ವಿದೇಶದಿಂದ ಬರುವವರನ್ನು ಸದ್ಯಕ್ಕೆ ಅಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು. ಆಕಸ್ಮಾತï ವಿದೇಶಗಳಿಂದ ಜಿಲ್ಲೆಗೆ ಆಗಮಿಸಿದ್ದಲ್ಲಿ ಅವರ ವಿವರವನ್ನು ಆರೋಗ್ಯ ಇಲಾಖೆಗೆ ತಿಳಿಸಬೇಕು. ಸಹಾಯವಾಣಿ 104ಕ್ಕೂ ಮಾಹಿತಿ ನೀಡಬೇಕೆಂದು ಎಂದು ಅವರು ಮನವಿ ಮಾಡಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಯುಗಾದಿ ಜಾತ್ರಾ ಮಹೋತ್ಸವದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಅಗತ್ಯ ವೈದ್ಯಕೀಯ ಮುಂಜಾಗರೂಕತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಅಲ್ಲಿಗೆ ಬರುವ ಭಕ್ತಾಧಿಗಳ ತಪಾಸಣೆಗಾಗಿ ಕೌದಹಳ್ಳಿ, ಪಾಲಾರï ಬಳಿ ಶಿಬಿರ ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಾಹೀರಾತು

ಇದೇ ವೇಳೆ ಹಕ್ಕಿಜ್ವರ ಕುರಿತು ವಿವರಿಸಿದ ಜಿಲ್ಲಾಧಿಕಾರಿಯವರು ಕೇರಳದಲ್ಲಿ ಹಕ್ಕಿಜ್ವರ ಪ್ರಕರಣ ಹಿನ್ನಲೆಯಲ್ಲಿ ಗಡಿಭಾಗದ ಚೆಕ್‍ಪೋಸ್ಟ್‍ಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಈಗಾಗಲೇ ನಾಲ್ಕುಕಡೆ ಚೆಕ್‍ಪೋಸ್ಟ್ ಗಳಲ್ಲಿ ತೀವ್ರ ತಪಾಸಣೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲೇ ಇರುವ ಪೌಲ್ಟ್ರಿ ಫಾರಂಗಳಿಂದ ಅಗತ್ಯಕ್ಕನುಸಾರವಾಗಿ ಕೋಳಿಗಳ ಸರಬರಾಜು ಆಗಲಿದೆ. ಈ ವಿಷಯದಲ್ಲಿ ಅನಗತ್ಯ ಭೀತಿ ಬೇಡ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವï, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ. ರವಿ, ಸರ್ಕಾರಿ ವೈದ್ಯಕೀಯ ಕಾಲೇಜಿನ ಡೀನï ಡಾ. ಸಂಜೀವï, ಜಿಲ್ಲಾಸ್ಪತ್ರೆ ಸರ್ಜನï ಡಾ. ಕೃಷ್ಣಪ್ರಸಾದï, ಪಶು ಪಾಲನಾ ಇಲಾಖೆಯ ಉಪ ನಿರ್ದೇಶಕ ವೀರಭದ್ರಯ್ಯ ಹಾಜರಿದ್ದರು.


Be the first to comment

Leave a Reply

Your email address will not be published.


*