ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದು ಹರಿಹರದ ಶಾಸಕ S.ರಾಮಪ್ಪ ಹೇಳಿಕೆ .
ಹರಿಹರದ ಜನತೆಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸುವಂತೆ ಹರಿಹರದ ಶಾಸಕ ಯಶ್ ರಾಮಪ್ಪ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು .
ಇಂದು ಹರಿಹರ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ತಾಲೂಕಿನ ಜನತೆ ಯಾವುದೇ ರೀತಿಯಲ್ಲಿ ಭಯ ಬೀಳುವ ಅವಶ್ಯಕತೆಯಿಲ್ಲ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.ಕಾರಣ ಕಾರಣ ಕರೋನ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ ,ಈಗಾಗಲೇ ವಿದೇಶದಿಂದ ಬಂದವರ ಮಾಹಿತಿಯನ್ನು ಕಲೆ ಹಾಕಿದ್ದು ಅವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆಯನ್ನು ಮಾಡಿದ್ದಾರೆ.ಅನಾವಶ್ಯಕವಾಗಿ ಹೊರಗಡೆ ತಿರುಗಾಡದಂತೆ ಸಂಬಂಧಿಸಿದ ಅಧಿಕಾರಿಗಳು ಖಡಕ್ ಸೂಚನೆ ನೀಡಿದ್ದಾರೆ.ನಗರದ ಪ್ರತಿ ವಾರ್ಡಿನಲ್ಲೂ ತರಕಾರಿ ಗಾರಿಗಳ ವ್ಯವಸ್ಥೆಯನ್ನು ಮಾಡಿದ್ದು ಅಗತ್ಯ ವಸ್ತುಗಳ ಪೂರೈಕೆಗೆ ಸಂಬಂಧಿಸಿದಂತೆ ದಿನದ ಇಪ್ಪತ್ನಾಲ್ಕು ಗಂಟೆ ಸೇವೆ ನೀಡುವಂತೆ ಅಧಿಕಾರಿಗಳು ಸಂಬಂಧಿಸಿದ ಅಂಗಡಿಯ ಮಾಲೀಕರಿಗೆ ತಿಳಿಸಿದ್ದಾರೆ .ಜನತೆಯ ಸಾಮಾಜಿಕ ಅಂತರದಲ್ಲಿ ನಿಂತು ತಮ್ಮಂದಿರಿಂದ ವಸ್ತುಗಳನ್ನು ಪಡೆದುಕೊಳ್ಳಬೇಕು ಹಾಗೂ ಕರೋನಾ ವೈರಸ್ ಹರಡದಂತೆ ಮುಂಜಾಗೃತ ಅಗತ್ಯ ಕ್ರಮ ಸಾರ್ವಜನಿಕರು ತೆಗೆದುಕೊಳ್ಳಬೇಕು ಗುಂಪು ಗುಂಪಾಗಿ ಜನರು ಒಂದು ಕಡೆ ಸೇರುವುದರಿಂದ ಕರೋನಾ ವೈರಸ್ ಶೀಘ್ರವಾಗಿ ಹರಡುತ್ತದೆ ಆದ್ದರಿಂದ ಸಾಧ್ಯವಾದಷ್ಟು ಜನರ ಜನ ನಡುವೆ ಅಂತರವನ್ನು ಕಾಯ್ದುಕೊಂಡು ಕರೋನಾ ವೈರಸ್ ಹರಡದಂತೆ ಎಚ್ಚರಿಕೆ ವಹಿಸಿ ಎಂದು ಇದೇ ಸಂದರ್ಭದಲ್ಲಿ ಹೇಳಿದರು ನನ್ನ ಮತಕ್ಷೇತ್ರದ ಜನರು ಯಾವುದೇ ರೀತಿಯ ಭಯಬೀಳುವ ಅವಶ್ಯಕತೆ ಇಲ್ಲ ದಿನನಿತ್ಯ ಬಳಕೆಯ ಸಾಮಗ್ರಿಗಳ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳುವ ವಿಚಾರವಾಗಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪ್ರತಿಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದೇನೆ ನಿಮ್ಮಗಳ ಸೇವೆಯಲ್ಲಿ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸುತ್ತಿದ್ದೇನೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು .
ಇಂದಿನ ತುರ್ತು ಸಭೆಯಲ್ಲಿ ಹರಿಹರದ ತಾಲ್ಲೂಕು ದಂಡಾಧಿಕಾರಿ ರಾಮಚಂದ್ರಪ್ಪ ಕೆಬಿ, ಆರೋಗ್ಯಾಧಿಕಾರಿ ಚಂದ್ರ ಮೋಹನ್, ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಪ್ರಸಾದ್ ,ಪೌರಾಯುಕ್ತೆ ಎಸ್ ಲಕ್ಷ್ಮಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮೀಪತಿ ,ತಾಲ್ಲೂಕು ವೈದ್ಯಾಧಿಕಾರಿ ಹನುಮಾನಾಯಕ್ ಹಾಗೂ ಸಂಬಂಧಿಸಿದ ಇಲಾಖೆಯ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು .
Be the first to comment