ರಾಜ್ಯ ಸುದ್ದಿಗಳು
ಬೆಂಗಳೂರು: ನೋಟುಗಳ ಮೂಲಕ ಕೊರೊನಾ ಸೋಂಕು ಹರಡುವ ಸಾಧ್ಯತೆ ಇರುವ ಕಾರಣದಿಂದ, ನಗರದ ಸೂಪರ್ ಮಾರ್ಕೆಟ್‌ಗಳಲ್ಲಿ, ಮಾಲ್‌ಗಳಲ್ಲಿ ಕಾರ್ಡ್‌ಗಳ ಮೂಲಕ ಮಾತ್ರ ಹಣವನ್ನು ಸ್ವೀಕರಿಸಲಾಗುತ್ತಿದೆ. ಆದರೆ, ಸಣ್ಣ ದಿನಸಿ ಅಂಗಡಿಗಳಲ್ಲಿ, ತರಕಾರಿ ಮಳಿಗೆಗಳಲ್ಲಿ ಉತ್ಪನ್ನಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ನಗದು ರೂಪದಲ್ಲಿಯೇ ಹಣವನ್ನು ತೆಗೆದುಕೊಳ್ಳುತ್ತಿದ್ದಾರೆ.
‘ಅಕ್ಕಿ, ಬೇಳೆ, ತರಕಾರಿ ಸೇರಿ ದಂತೆ ಎಲ್ಲವನ್ನೂ ₹20ರಿಂದ ₹30 ರಷ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಎಟಿಎಂಗಳಿಗೆ ಹೋಗುವುದಕ್ಕೆ ಸಾಧ್ಯವಾಗುತ್ತಿಲ್ಲ. ಕಾರ್ಡ್ ಸ್ವೈಪ್ ಮಾಡುತ್ತೇನೆ ಎಂದರೂ ಸಣ್ಣ ದಿನಸಿ ಅಂಗಡಿಯವರು ಒಪ್ಪಿಕೊಳ್ಳುತ್ತಿಲ್ಲ’ ಎಂದು ಯಶವಂತಪುರದ ಜಯಪ್ರಕಾಶ್ ಅಸಮಾಧಾನ ವ್ಯಕ್ತಪಡಿಸಿದರು.
Be the first to comment