ಜೀಲ್ಲಾ ಸುದ್ದಿಗಳು
ಕಲಬುರಗಿ : ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಅವರು ಕೊರೋನಾ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ರವಿವಾರ ಕಲಬುರಗಿ ರೈಲು ನಿಲ್ದಾಣದ ಬಳಿಯಿರುವ ಬಸ್ ನಿಲ್ದಾಣದಲ್ಲಿದ್ದ ಭಿಕ್ಷುಕರು, ನಿರ್ಗತಿಕರಿಗೆ ಆಹಾರ ಪೊಟ್ಟಣ ವಿತರಿಸಿದರು.
ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ಜಿಲ್ಲಾಧಿಕಾರಿ ಶರತ್ ಬಿ., ಎಸ್.ಪಿ.ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ಡಿ.ಸಿ.ಪಿ. ಕಿಶೊರ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ ಇದ್ದರು.
Be the first to comment