ಕೊರೋನಾದಿಂದ ಮೃತರಾದ ಕಲಬುರಗಿ ವಯೋವೃದ್ಧನ ಮಗಳು 14 ದಿನಗಳ ಚಿಕಿತ್ಸೆಯ ನಂತರ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

ವರದಿ: ರಾಜೇಂದ್ರ ರಾಜವಾಳ ಕಲಬುರಗಿ

ಜೀಲ್ಲಾ ಸುದ್ದಿಗಳು

ಕಲಬುರಗಿ : ಕೊರೋನಾ ಸೋಂಕಿನಿಂದ‌ ಮೃತರಾದ ಕಲಬುರಗಿಯ 76 ವರ್ಷದ ವಯೋವೃದ್ಧನ ಮಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು,‌ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.

76 ವರ್ಷದ ವಯೋವೃದ್ಧ ಕಳೆದ‌ ಮಾರ್ಚ್ 10 ರಂದು ವಯೋಸಹಜ ಕಾಯಿಲೆಯ ಜೊತೆಗೆ ಕೊರೋನಾ‌ ಸೋಂಕಿನಿಂದ ಮೃತಪಟ್ಟಿದ್ದ. ಇದರಿಂದ ಕಲಬುರಗಿ ರೆಡ್ ಅಲರ್ಟ್ ಆಗಿ ಮಾರ್ಪಟ್ಟಿತ್ತು. ಮೃತನ ನೇರ ಸಂಪರ್ಕದಲ್ಲಿ ಬಂದಿದ್ದ ಆತನ 45 ವರ್ಷದ ಮಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಕಲಬುರಗಿ ಇ.ಎಸ್.ಐ.ಸಿ ಮೆಡಿಕಲ್ ಕಾಲೇಜಿನ ಐಸೋಲೇಷನ್ ವಾರ್ಡ್ ನಲ್ಲಿಟ್ಟು ತೀವ್ರ ನಿಗಾದಡಿ ಚಿಕಿತ್ಸೆ ನೀಡಲಾಗಿತ್ತು.

ಚಿಕಿತ್ಸೆಯ 14 ದಿನಗಳ ನಂತರ ಸದರಿ ಮಹಿಳೆಗೆ ಕೋವಿಡ್-19 ಪರೀಕ್ಷೆ ಮಾಡಿದಾಗ ನೆಗೆಟಿವ್ ಕಂಡುಬಂದಿದೆ. 24 ಗಂಟೆ‌ ನಂತರ‌ ಮತ್ತೊಮ್ಮೆ ಪರೀಕ್ಷಿಸಿದಾಗ ಸಹ ನೆಗೆಟಿವ್ ವರದಿ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*