ದೇಶದ ಸುದ್ದಿಗಳು
ನವದೆಹಲಿ : ಮಹಾಮಾರಿ ಕೊರೊನಾ ಸೋಂಕು ರಾಷ್ಟ್ರವ್ಯಾಪಿ ಹೆಚ್ಚುತ್ತಿರುವ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ರಾಜ್ಯಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದ ಮೋದಿ, ಲಾಕ್‌ಡೌನ್‌ನ್ನ ಗಂಭೀರವಾಗಿ ಪರಿಗಣಿಸುವಂತೆ ಸೂಚನೆ ನೀಡಿದ್ದಾರೆ.
ಮುಂದಿನ ವಾರವೂ ಕೊರೊನಾ ಪರೀಕ್ಷೆ ಹಾಗು ಸೋಂಕಿತರ ಜೊತೆ ಸಂಪರ್ಕ ಇದ್ದವರನ್ನ ಕ್ವಾರೆಂಟೈನ್ ಮಾಡಬೇಕು. ಮೆಡಿಕಲ್ ಉತ್ಪನ್ನಗಳು ಯಾವುದೇ ತಡೆ ಇಲ್ಲದೆ ಶೀಘ್ರವಾಗಿ ತಲುಪಬೇಕು ಎಂದು ಮೋದಿ ಸೂಚನೆ ನೀಡಿದ್ದಾರೆ.
#WATCH Prime Minister Narendra Modi's message at video conference with Chief Ministers on #COVID19 situation in the country. (Source: PMO) pic.twitter.com/H7ZU80tM1w
— ANI (@ANI) April 2, 2020
ರಾಜ್ಯಗಳ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆದ ಪ್ರಧಾನಿ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರನ್ನ ಶೀಘ್ರವೇ ಗುರುತಿಸಿ ಕ್ವಾರೆಂಟೈನ್ ಮಾಡಬೇಕು. ಸಮುದಾಯಕ್ಕೆ ಕೊರೊನಾ ಸೋಂಕು ಹರಡದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
Be the first to comment