ಜೀಲ್ಲಾ ಸುದ್ದಿಗಳು
ಹರಿಹರ:-ಕರೋನಾ ವೈರಸ್ ಮೂರನೇ ಹಂತ ತಲುಪಿದರೆ ಆ ಭಗವಂತನಿಂದಲೂ ಕಾಪಾಡಲು ಸಾಧ್ಯವಿಲ್ಲ
ಇಂದು ಹರಿಹರದ ನಗರಸಭೆ ಸಭಾಂಗಣದಲ್ಲಿ ಕರೋನ ವೈರಸ್ ನಿಯಂತ್ರಣದ ಕುರಿತು ಅಧಿಕಾರಿಗಳ ಅಧಿಕಾರಿಗಳ ಮಟ್ಟದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಎಲ್ಲ ಇಲಾಖೆಯ ಅಧಿಕಾರಿಗಳು ಕರೋನಾ ವೈರಸ್ ನಿಯಂತ್ರಣದಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ಶ್ರಮ ವಹಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ .ಆದರೆ ಕೆಲವು ಸಮುದಾಯದ ಕೆಲವು ಧರ್ಮದ ಯುವಕರು ಈ ವೈರಸ್ನ ಹಾಡುವಿಕೆಯ ವಿಚಾರದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದಾರೆ. ಸಂಬಂಧಿಸಿದ ಪೊಲೀಸ್ ಇಲಾಖೆಯವರು ಅನಗತ್ಯವಾಗಿ ತಿರುಗಾಟ ಮಾಡುತ್ತಿರುವವರ ಮೇಲೆ ಯಾವುದೇ ಮುಲಾಜಿಲ್ಲದೆ ನಿದ್ರ್ಯಾಕ್ಷಣವಾಗಿ ಕ್ರಮ ತೆಗೆದುಕೊಳ್ಳಿ ,ಯಾವುದೇ ಕಾರಣಕ್ಕೂ ನಿಮ್ಮ ಶ್ರಮ ವ್ಯರ್ಥವಾಗಲು ಬಿಡಬೇಡಿ .ಸರ್ಕಾರ ನಿಮಗೆ ಎಲ್ಲ ರೀತಿಯ ಸ್ವಾತಂತ್ರ್ಯವನ್ನು ನೀಡಿದ್ದೇವೆ ಎಂದು ಪೊಲೀಸ್ ಇಲಾಖೆಯವರಿಗೆ ಅನಗತ್ಯವಾಗಿ ತಿರುಗಾಟ ಮಾಡುವವರ ಮೇಲೆ ಕ್ರಮ ತೆಗೆದುಕೊಳ್ಳಲು ಆದೇಶ ನೀಡಿದರು.
ಇದೇ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಿ ,ದಿನಸಿ ಪದಾರ್ಥ ಮಾರಾಟ ಮಾಡುವ ಅಂಗಡಿಗಳನ್ನು ದಿನದ ಇಪ್ಪತ್ತನಾಲ್ಕು ಗಂಟೆ ತೆಗೆಯುವಂತೆ ತಿಳಿಸಿ ಅವರಿಗೆ ಯಾವುದೇ ಕಾರಣಕ್ಕೂ ನಿರ್ಬಂಧವನ್ನು ಹಾಕ ಬೇಡಿ ಎಂದು ಹೇಳಿದರು .
ಈ ಸಂದರ್ಭದಲ್ಲಿ ಹರಿಹರ ಶಾಸಕ ಎಸ್ ರಾಮಪ್ಪ ,ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯರು, ಜಿಲ್ಲಾ ನಿರ್ವಹಣಾಧಿಕಾರಿ ಪದ್ಮಾ ವಸಂತಪ್ಪ ,ಜಿಲ್ಲಾ ಆರೋಗ್ಯಾಧಿಕಾರಿ ರಾಘವೇಂದ್ರ ಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ ಚಂದ್ರ ಮೋಹನ್ , ತಾಲ್ಲೂಕು ದಂಡಾಧಿಕಾರಿ ರಾಮಚಂದ್ರಪ್ಪ ಕೆ ಬಿ ,ನಗರಸಭಾ ಆಯುಕ್ತೆ ಎಸ್ ಲಕ್ಷ್ಮಿ ,ತಾಲ್ಲೂಕು ಪಂಚಾಯಿತಿ ಇಒ ಲಕ್ಷ್ಮೀಪತಿ ,ತಾಲ್ಲೂಕು ವೃತ್ತ ನಿರೀಕ್ಷಕ ಶಿವಪ್ರಸಾದ್, ಹಾಗೂ ತಾಲ್ಲೂಕಿನ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Be the first to comment