ಸಂತೆ ಮೈದಾನದಲ್ಲಿ ಸಾಮಾಜಿಕ ಅಂತರ ವ್ಯವಸ್ಥೆ ವೀಕ್ಷಣೆ

ವರದಿ:ಪ್ರಕಾಶ ಮಂದಾರ

ಜೀಲ್ಲಾ ಸುದ್ದಿಗಳು

ಹರಿಹರ ನಗರಸಭೆಯ ಸಭಾಂಗಣದಲ್ಲಿ ಇಂದು ಕೊರೊನಾ ವೈರಸ್ ಸೋಂಕು ನಿಯಂತ್ರಣ ಕುರಿತು ಏರ್ಪಡಿಸಲಾಗಿದ್ದ ಸಭೆಯ ಮುನ್ನ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪನವರು ಹರಿಹರದ ಸಂತೆ ಮೈದಾನದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸಾರ್ವಜನಿಕರು ತರಕಾರಿ ಕೊಂಡುಕೊಳ್ಳಲು ವ್ಯವಸ್ಥೆ ಮಾಡಲಾಗಿರುವ ಸಾಮಾಜಿಕ ಅಂತರ ಕಾರ್ಯವನ್ನು ವೀಕ್ಷಿಸಿದರು. ಈ ವೇಳೆ ಶಾಸಕರಾದ ಎಸ್.ರಾಮಪ್ಪ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್‍ಪಿ ಹನುಮಂತರಾಯ, ಜಿಪಂ ಸಿಇಒ ಪದ್ಮಾ ಬಸವಂತಪ್ಪ ಹಾಗೂ ಇತರ ಅಧಿಕಾರಿಗಳು ಇದ್ದರು.

Be the first to comment

Leave a Reply

Your email address will not be published.


*