ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕಿಗೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ. ಈ ವ್ಯಕ್ತಿಯನ್ನು ತಬ್ಲಿಘಿ ಜಮಾತ್ ಮರ್ಕಜ್ ನಿಂದ ತರಲಾಗಿತ್ತು.
ನವದೆಹಲಿ: ನಿಜಾಮುದ್ದೀನ್ ಮರ್ಕಜ್ ನಿಂದ ಹೊರಬಂದ ಕೊರೊನಾ ವೈರಸ್ ಸೋಂಕಿತರ ಪೈಕಿ ಮೂರನೇ ವ್ಯಕ್ತಿ ಮೃತಪಟ್ಟಿದ್ದಾನೆ. ಇದರಿಂದ ರಾಷ್ಟ್ರರಾಜಧಾನಿಯಲ್ಲಿ ಈ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ತಲುಪಿದೆ. ಈ ಐವರಲ್ಲಿ ಮೂವರು ಸೊಂಕಿತರು ಮರ್ಕಜ್ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಒಟ್ಟು 91 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಮಾಹಿತಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೆಜ್ರಿವಾಲ್, ದೆಹಲಿಯಲ್ಲಿ ಪತ್ತೆಯಾಗಿರುವ ಒಟ್ಟು 386 ಸೋಂಕಿತರ ಪೈಕಿ 259 ಜನರು ತಬ್ಲಿಘಿ ಜಮಾತ್ ನವರಾಗಿದ್ದಾರೆ. ಮರ್ಕಜ್ ರೋಗಿಗಳ ಕಾರಣ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಆರು ಹೇಳಿದ್ದಾರೆ. ಆದರೆ, ಇನ್ನೊಂದೆಡೆ ದೆಹಲಿಯಲ್ಲಿ ಕೊರೊನಾ ವೈರಸ್ ನ ಕಮ್ಯೂನಿಟಿ ಹರಡುವಿಕೆ ಇನ್ನೂ ಆರಂಭವಾಗಿಲ್ಲ ಎಂಬುದು ಸಂತಸದ ವಿಷಯ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಸದ್ಯ ದೆಹಲಿಯಲ್ಲಿನ ಸ್ಥಿತಿ ಭಾರಿ ನಿಯಂತ್ರಣದಲ್ಲಿದ್ದು, ಜನರಿಗೆ ಇದೆ ರೀತಿ ಮುಂಜಾಗ್ರತೆ ವಹಿಸುವಂತೆ ಮನವಿ ಮಾಡಿದ್ದಾರೆ. ಸದ್ಯ ದೆಹಲಿಯಲ್ಲಿ ಕೋರೋನಾ ಸೋಂಕಿಗೆ ಒಳಗಾದ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ವೆಂಟಿಲೇಟರ್ ಮೇಲೆ ಇಡಲಾಗಿದ್ದು, ಭಯಪಡುವ ಯಾವುದೇ ಅಗತ್ಯತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.
Be the first to comment