ಕೊರೊನಾ: ಜಿಲ್ಲೆಯ ಎಲ್ಲಾ 21 ಜನರ ವರದಿ ನೆಗೆಟಿವ್

ವರದಿ:ರಾಘವೇಂದ್ರ ಮಾಸ್ತರ ಸುರಪುರ

ಜೀಲ್ಲಾ ಸುದ್ದಿಗಳು

ಅಂಬಿಗ ನ್ಯೂಸ್ ಯಾದಗಿರಿ

ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇಲ್ಲಿಯವರೆಗೆ ಕಳುಹಿಸಿದ್ದ ಒಟ್ಟು 21 ಮಾದರಿಗಳ ಪೈಕಿ ಬಾಕಿಯಿದ್ದ 5 ಮಾದರಿಗಳ ವರದಿ ಕೂಡ ಸೋಮವಾರ ನೆಗೆಟಿವ್ ಬಂದಿವೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಿಂದ ಕಳುಹಿಸಿದ್ದ 21 ಮಾದರಿಗಳ ಪೈಕಿ ನಿಜಾಮುದ್ದೀನ್ ತಬ್ಲಿಘಿ ಮಾರ್ಕಾಜ್ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಗೆ ವಾಪಸ್ಸಾದ 5 ಜನರ ಗಂಟಲಿನ ದ್ರಾವಣವನ್ನು ಎರಡು ಭಾರಿ ಕೋವಿಡ್-19 ಪರೀಕ್ಷೆಗಾಗಿ ಕಳುಹಿಸಲಾಗಿತ್ತು.

ಈ ಎರಡು ಬಾರಿಯೂ ಕಲಬುರಗಿ ಜಿಮ್ಸ್ ಆಸ್ಪತ್ರೆಯಿಂದ ನೆಗೆಟಿವ್ ವರದಿ ಬಂದಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅರಕೇರಾ (ಕೆ) ಹಾಸ್ಟೆಲ್‍ನ ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ 24 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ವೈರಸ್ ತಡೆಗೆ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಅವರು ಮನವಿ ಮಾಡಿದ್ದಾರೆ.

 

Be the first to comment

Leave a Reply

Your email address will not be published.


*