ಜೀಲ್ಲಾ ಸುದ್ದಿಗಳು
ಮಂಗಳೂರು : ಕೊರೊನಾ ಮಹಾಮಾರಿ ಮಂಗಳೂರನ್ನು ಬಿಟ್ಟುಬಿಡದಂತೆ ಕಾಡುತ್ತಿದೆ. ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಕೊರೊನಾ ತಡೆಗೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಮಂಗಳೂರು ಮಹಾನಗರ ಪಾಲಿಕೆ ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನೇ ತೆರವಿಗೆ ಮುಂದಾಗಿದೆ.
ಕೇಂದ್ರ ತರಕಾರಿ ಹಾಗೂ ಮೀನುಮಾರುಕಟ್ಟೆಯ ಎರಡು ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದ್ದು, ದುರಸ್ಥಿ ಪಡಿಸಲಾಗದ ಸ್ಥಿತಿಗೆ ತಲುಪಿವೆ.
ಹೀಗಾಗಿ ಆರೋಗ್ಯ, ನೈರ್ಮಲ್ಯದ ದೃಷ್ಟಿಯಿಂದ ವ್ಯಾಪಾರ ವಹಿವಾಟನ್ನು ಸುಲಭ ಹಾಗೂ ಅನುಕೂಲಕರವಾಗಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸೆಂಟ್ರಲ್ ಮಾರುಕಟ್ಟೆಯ ಹಳೆಯ ಕಟ್ಟಡಗಳ ತೆರವಿಗೆ ಮುಂದಾಗಿದೆ. ಅಲ್ಲದೇ ಅದೇ ಜಾಗದಲ್ಲಿ ಸುಸಜ್ಜಿತವಾದ ಹೊಸ ಕಟ್ಟಡ ನಿರ್ಮಾಣ ಮಾಡಲು ಪ್ಲ್ಯಾನ್ ರೂಪಿಸಿದೆ.
ಮಂಗಳೂರಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಸೆಂಟ್ರಲ್ ಮಾರ್ಕೆಟ್ ನಲ್ಲಿ ಸಾಮಾಜಿಕ ಅಂತರ ಕಾಪಾಡಲು ಕಷ್ಟಸಾಧ್ಯವಾಗಿತ್ತು. ಅಲ್ಲದೇ ಹಳೆಯ ಕಟ್ಟಡಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಚವೆನ್ನುವ ನಿಟ್ಟಿನಲ್ಲಿ ಈಗಾಗಲೇ ಮಾರುಕಟ್ಟೆಯನ್ನು ಬೈಕಂಪಾಡಿಯ ಎಪಿಎಂಸಿ ಮಾರುಕಟ್ಟೆಗೆ ಶೀಫ್ಟ್ ಮಾಡಲಾಗಿದೆ.
ವ್ಯಾಪಾರಸ್ಥರು ಕೂಡ ಎಪಿಎಂಸಿ ಮಾರುಕಟ್ಟೆಗೆ ಶಿಫ್ಟ್ ಆಗಿದ್ದಾರೆ. ಅಲ್ಲದೇ ಯಾವುದೇ ಕಾರಣಕ್ಕೂ ಸೆಂಟ್ರಲ್ ಮಾರುಕಟ್ಟೆಯ ಕಟ್ಟಡದಲ್ಲಿ ವ್ಯಾಪಾರ ವ್ಯವಹಾರವನ್ನು ಮುಂದುವರಿಸಲು ಅನುಮತಿಯನ್ನು ನೀಡುವುದಿಲ್ಲ ಅಂತಾ ಪಾಲಿಕೆಯ ಆಯುಕ್ತರು ಖಡಕ್ ಆಗಿಯೇ ಹೇಳಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲೀಗ ಹಳೆಯ ಕಟ್ಟಡವನ್ನು ತುರ್ತಾಗಿ ನೆಲಸಮಗೊಳಿಸಲು ಪಾಲಿಕೆ ಸಿದ್ದತೆ ಮಾಡಿಕೊಂಡಿದೆ. ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳು ಬಯಸಿದಲ್ಲಿ ಅವರು ಎಪಿಎಂಸಿ ಯಾರ್ಡ್ ನಲ್ಲಿ ವ್ಯವಹಾರ ನಡೆಸಬಹುದಾಗಿದೆ ಎಂದು ಪಾಲಿಕೆ ತಿಳಿಸಿದೆ.
Be the first to comment