ಜಿಲ್ಲಾಡಳಿತ ಗಮನಕ್ಕೆ ತರದೆ ಆಹಾರಧಾನ್ಯ ವಿತರಿಸುವಂತಿಲ್ಲ:ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್

ವರದಿ:ರಾಘವೇಂದ್ರ ಮಾಸ್ತರ ಸುರಪುರ

ಜೀಲ್ಲಾ ಸುದ್ದಿಗಳು

ಅಂಬಿಗ ನ್ಯೂಸ್ ಸುದ್ದಿ

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಏಪ್ರಿಲ್ 14ರವರೆಗೆ ದೇಶದಾದ್ಯಂತ ಲಾಕ್‍ಡೌನ್ ಘೋಷಣೆ ಆಗಿರುವ ಪ್ರಯುಕ್ತ ಸ್ವಯಂ ಸೇವಾ ಸಂಸ್ಥೆಯವರು ಹಾಗೂ ಸಾಮಾಜಿಕ ಕಾರ್ಯಕರ್ತರು ಜಿಲ್ಲಾಡಳಿತ ಗಮನಕ್ಕೆ ತರದೆ ಆಹಾರ ಧಾನ್ಯ ವಿತರಿಸುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸ್ವಯಂ ಸೇವಾ ಸಂಸ್ಥೆಯವರು ಹಾಗೂ ಸಾಮಾಜಿಕ ಕಾರ್ಯಕರ್ತರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಹಾಗೂ ಜಿಲ್ಲಾಡಳಿತ ಗಮನಕ್ಕೆ ತರದೆ ಆಹಾರ ಧಾನ್ಯ ವಿತರಿಸುತ್ತಿರುವುದು ಕಂಡುಬಂದಿರುತ್ತದೆ.

ಆದ್ದರಿಂದ ಆಹಾರ ಧಾನ್ಯಗಳನ್ನು ವಿತರಿಸುವ ಇಚ್ಛೆಯುಳ್ಳವರು ಇನ್ನು ಮುಂದೆ ನೇರವಾಗಿ ಶರಣಪ್ಪ ಪಾಟೀಲ್ ಮೊ: *9902193325* ಹಾಗೂ ರಘುವೀರಸಿಂಗ್ ಠಾಕೂರ್ ಮೊ: *9448911558* ಇವರಿಗೆ ಒಪ್ಪಿಸಬೇಕೆಂದು ಜಿಲ್ಲೆಯ ಸಂಘ-ಸಂಸ್ಥೆ/ ಸಾರ್ವಜನಿಕರಲ್ಲಿ ಕೋರಿದ್ದಾರೆ.

ಒಂದು ವೇಳೆ ಜಿಲ್ಲಾಡಳಿತದ ಗಮನಕ್ಕೆ ತರದೇ ದವಸಧಾನ್ಯ, ಆಹಾರ ವಿತರಿಸುವುದು ಕಂಡುಬಂದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Be the first to comment

Leave a Reply

Your email address will not be published.


*