ರಾಜ್ಯ ಸುದ್ದಿಗಳು
ಅಂಬಿಗ ನ್ಯೂಸ್ ಯಾದಗಿರಿ
ಬಾಲಕಿಗೆ ಕೋವಿಡ್ ಸೋಂಕು ತಗುಲಿರಲಿಲ್ಲ ಎಂದು ಖಚಿತವಾಗಿದೆ.ತೀವ್ರ ಜ್ವರ ಹಾಗೂ ಕೆಮ್ಮಿನಿಂದ ಬಳಲಿ, ಸಾವನ್ನಪ್ಪಿದ್ದ ಯಾದಗಿರಿ ಜಿಲ್ಲೆ ಶಹಾಪೂರ ತಾಲೂಕಿನ ಕೊಂಗಂಡಿ ಗ್ರಾಮದ 4 ವರ್ಷದ ಬಾಲಕಿ ಹಂಸವೇಣಿ ಯ ರಕ್ತದ ಮಾದರಿ ಹಾಗೂ ಗಂಟಲ ದ್ರವ ಪರೀಕ್ಷೆ ಪ್ರಯೋಗಾಲಯದ ವರದಿ ಬಂದಿದ್ದು, ನೆಗೆಟಿವ್ ಆಗಿದೆ.
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ. ಎಸ್. ಪಾಟೀಲ್
ಈ ಬಗ್ಗೆ ಖಚಿತ ಪಡಿಸಿ, ಅರಕೇರಾ ದ 20 ಜನರ ಹಾಗೂ ಕೊಂಗಂಡಿ ಗ್ರಾಮದ ಬಾಲಕಿ ಪ್ರಯೋಗಾಲಯದ ವರದಿಯಲ್ಲಿ ನೆಗೆಟಿವ್ ಬಂದಿದೆ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.
ಸ್ವತಃ ಆರೋಗ್ಯ ಇಲಾಖೆಯ ಸಿಬ್ಬಂದಿಯವರೆ ಮೊನ್ನೆ ದಿನ ಬಾಲಕಿಯ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸದೇ ತಾವೇ ಮಗುವಿನ ಅಂತ್ಯ ಸಂಸ್ಕಾರ ನೆರವೇರಿಸಿದ್ದರು ಇದರಿಂದಾಗಿ ಈಡೀ ಜಿಲ್ಲೆಯ ಜನತೆ ಆತಂಕದಲ್ಲಿದ್ದರು ಬಾಲಕಿಯ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ.
ಇನ್ನೊಂದೆಡೆ ಬೆಂಗಳೂರಿನಿಂದ ವಾಪಸಾಗಿದ್ದ ಜಿಲ್ಲೆಯ ಗೋಪಾಲಪುರ ಗ್ರಾಮದ 20 ಜನರ ವರದಿಗಳು ಸಹ ನೆಗೆಟಿವ್ ಆಗಿದ್ದು, ಸಾರ್ವಜನಿಕರು ನಿಟ್ಟಿಸಿರು ಬಿಡುವಂತಾಗಿದೆ.
ಬೆಂಗಳೂರಿನಿಂದ ವಲಸೆ ಬಂದಿದ್ದ ಕಾರ್ಮಿಕರು, ಅಲ್ಲಿ ಸೋಂಕಿತ ಮಹಿಳೆಯ ಜೊತೆ ಪ್ರಾರ್ಥಮಿಕ ಸಂಪರ್ಕ ಹೊಂದಿದ್ದರು ಎನ್ನುವ ಕಾರಣಕ್ಕೆ ಇಲ್ಲಿನ ಅರಕೆರೆ ಗ್ರಾಮದ ವಸತಿ ಶಾಲೆಯಲ್ಲಿ
ಪ್ರತ್ಯೇಕವಾಗಿರಿಸಲಾಗಿತ್ತು.
Be the first to comment