ಕೊರೋನಾ ಸ್ವಯಂ ಸೇವಕರಿಂದ ಚಿತ್ತಾಪುರ ತಾಲೂಕಿನಲ್ಲಿ ಅರಿವು ಕಾರ್ಯಕ್ರಮ

ವರದಿ: ರಾಜೇಂದ್ರ ರಾಜವಾಳ ಕಲಬುರಗಿ

ಜೀಲ್ಲಾ ಸುದ್ದಿಗಳು

ಕಲಬುರಗಿ : -ಕೊರೋನಾ ಸ್ವಯಂ ಸೇವಕರು ಗುರುವಾರ ಚಿತ್ತಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಸಾರ್ವಜನಿಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಮೂಲಕ ಕರೋನಾ ವೈರಸ್ ತಡೆಗಟ್ಟುವ ಬಗ್ಗೆ ಅರಿವು ಮೂಡಿಸಿದರು.

ಇದಲ್ಲದೇ ಅವರು ಕರೋನಾ ವೈರೆಸ್ ತಡೆಗಟ್ಟುವ ಬಗ್ಗೆ ಜನರಲ್ಲಿ ಸ್ಯಾನಿಟೈಸರ್ ಬಳಿಕೆ, ಪ್ರತಿ ಹತ್ತು ನಿಮಿಷ ಹಾಗೂ ಅರ್ಧ ಗಂಟೆಗೊಮ್ಮೆ ಸಾಬೂನಿಂದ ಕೈ ತೊಳೆಯುವುದು ಹಾಗೂ ಮಾಸ್ಕ್ ಧರಿಸುವ ವಿಧಾನ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಯಾವುದೇ ವ್ಯಕ್ತಿ ಕೆಮ್ಮುವಾಗ, ಸೀನುವಾಗ ಕಡ್ಡಾಯವಾಗಿ ಕರವಸ್ತ್ರ ಉಪಯೋಗಿಸಬೇಕು.

ಪರಸ್ಪರ ಮಾತಾಡುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಆಗಾಗ ಸಾಬೂನಿನಿಂದ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು ಮತ್ತು ಹೆಚ್ಚಿನ ಜನಸಂದಣಿಯಲ್ಲಿ ಭಾಗವಹಿಸದಂತೆ ಎಚ್ಚರಿಕೆ ವಹಿಸಿದಲ್ಲಿ ಕೊರೋನಾ ಸೊಂಕು ತಡೆಗಟ್ಟಬಹುದಾಗಿದೆ ಎಂದು ಮಾಹಿತಿ ನೀಡಿದರು.
ಮನೆಯಲ್ಲಿ ಯಾರಿಗಾದರೂ ಕೆಮ್ಮು, ಜ್ವರ, ಸೀತ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ಪ್ರೇರಿತರಾಗಿ ಆರೋಗ್ಯ ಇಲಾಖೆಯ ಸಹಾಯವಾಣಿ 104 ಕರೆ ಮಾಡಿ ಚಿಕಿತ್ಸೆ ಒಳಪಡಿಸುವ ಬಗ್ಗೆ ತಿಳಿ ಹೇಳಿದರು.

Be the first to comment

Leave a Reply

Your email address will not be published.


*