ಜೀಲ್ಲಾ ಸುದ್ದಿಗಳು
ಬೀದರ್, ಕರೋನಾ ಸಾಂಕ್ರಾಮಿಕ ತಡೆಗೆ ಮತ್ತು ನೀರಿನ ಸಮಸ್ಯೆ ಎದುರಿಸುತ್ತಿರುವ ಹಳ್ಳಿಗಳಿಗೆ ತುರ್ತಾಗಿ ನೀರು ಸರಬರಾಜಿಗೆ ಕ್ರಮ ವಹಿಸುವುದಕ್ಕೆ ಸಂಬಂಧಿಸಿದಂತೆ
ಚರ್ಚಿಸಲು ಪಶು ಸಂಗೊಪನೆ ಹಾಗೂ ಬೀದರ್ ಮತ್ತು ಯಾದಗಿರಿ ಜಿಲ್ಲೆಗಳ ಉಸ್ತುವಾರಿ ಸಚಿವರಾದ ಶ್ರೀ ಪ್ರಭು ಚವ್ಹಾಣ್ ಅವರು, ಸಂಸದರಾದ ಭಗವಂತ ಖೂಬಾ ಅವರ ಸಮ್ಮುಖದಲ್ಲಿ
ಔರಾದ್ (ಬಾ) ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಏ.10ರಂದು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ತಮ್ಮ ತಮ್ಮ ಜವಾಬ್ದಾರಿ ಅರಿತು ಕೆಲಸವನ್ನು ತೀವ್ರಗೊಳಿಸುವಂತೆ ಎಲ್ಲ ಅಧಿಕಾರಿಗಳಿಗೆ ಸಲಹೆ ಮಾಡಿದರು.
ಪ್ರತಿಯೊಂದು ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಆಯಾ ಇಲಾಖೆಯ ಕಾರ್ಯವೈಖರಿಯನ್ನು ಅವಲೋಕಿಸಿದ ಸಚಿವರು,
ವಿಳಂಬಕ್ಕೆ ಆಸ್ಪದ ಕೊಡದ ಹಾಗೆ ಕೆಲಸ ಮಾಡುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಯಾವುದೇ ಹಳ್ಳಿಗಳಲ್ಲಿ ಕುಡಿವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಬೇಡಿಕೆ ಇರುವ ಕಡೆಗೆ ತುರ್ತಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದರು.
*ಶುಚಿತ್ವಕ್ಕೆ ಒತ್ತು ಕೊಡಿ:* ಕೊರೋನಾ ಹಿನ್ನೆಲೆಯಲ್ಲಿ ಶುಚಿತ್ವಕ್ಕೆ ಪ್ರಥಮಾದ್ಯತೆ ಕೊಡಬೇಕಿದೆ. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿಯಿಂದ ನಾನಾ ಕ್ರಮಗಳು ತುರ್ತಾಗಿ ಆಗಬೇಕು.
ಸಿಟಿನಲ್ಲಿ ಚರಂಡಿ ಸ್ವಚ್ಛಗೊಳಿಸಬೇಕು.
ಬ್ಲಿಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು ಎಂದು ಸಚಿವರು ಸೂಚಿಸಿದರು.
*ಚೆಕ್ಪೋಸ್ಟ್ ವ್ಯವಸ್ಥಿತವಾಗಿರಲಿ:*
ಅಗತ್ಯ ವೈದ್ಯಕೀಯ ಸೌಕರ್ಯ,
ಊಟ, ಉಪಹಾರ ಸೇರಿದಂತೆ
ಚೆಕ್ ಪೋಸ್ಟ್ ಬಳಿ ಇರುವ ಪೊಲೀಸ್ ಮತ್ತು ವೈದ್ಯರಿಗೆ ಎಲ್ಲಾ ರೀತಿಯ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವರು ಇದೆ ವೇಳೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
*ಅಧಿಕಾರಿಗಳಿಗೆ ಎಚ್ಚರಿಕೆ:* ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ
ಹಲವಾರು ಬಾರಿ ವಿಡಿಯೋ ಸಂವಾದ ನಡೆಸಿದಾಗ ಜಿಲ್ಲಾಧಿಕಾರಿಗಳು ನೀಡಿರುವ ನಿರ್ದೇಶನಗಳನ್ನು ಅಧಿಕಾರಿಗಳು ಚಾಚುತಪ್ಪದೇ ಪಾಲಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವುದು ಕಂಡುಬಂದಲ್ಲಿ ಶಿಸ್ತುಕ್ರಮಕ್ಕೆ ಶಿಪಾರಸ್ಸು ಮಾಡಲಾಗುವುದು ಎಂದು ಇದೆ ವೇಳೆ ಸಚಿವರು ಬೇಜಾವಾಬ್ದಾರಿ ತೋರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎಚ್ಚರಿಸಿದರು.
ಈ ವೇಳೆ ತಾಪಂ ಅಧ್ಯಕ್ಷರು, ಅಧಿಕಾರಿಗಳು ಇದ್ದರು..
ಕೊವಿಡ್-19 ವೈರಸ್ ನಿಯಂತ್ರಣಕ್ಕೆ, ಸಮರ್ಪಕ ನೀರು ಪೂರೈಕೆ ಕ್ರಮಕ್ಕೆ ಸೂಚನೆ
Be the first to comment