ಜೀಲ್ಲಾ ಸುದ್ದಿಗಳು
ಬೀದರ್, ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ್ ಅವರು ಏ.13ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆರೋಗ್ಯ ಸರಿ ಇಲ್ಲದವರ ಅರ್ಜಿಗಳನ್ನು ಸ್ವೀಕರಿಸಿದರು. ಅತೀ ತುರ್ತಾಗಿ ಬೇರೆ ಕಡೆಗಳಲ್ಲಿ ಚಿಕಿತ್ಸೆಗೆ ಹಾಜರಾಗಲು ಕೋರಿ ಬಂದಿರುವ ಅರ್ಜೀಗಳನ್ನು ಸರಿಯಾಗಿ ಪರಿಶೀಲಿಸಿ, ಅವಶ್ಯವಿದೆಯೋ ಇಲ್ಲವೋ ಎಂಬುದನ್ನು ತಿಳಿದು, ಅವರಿಗೆ ಅನುಮತಿ ಪತ್ರ ನೀಡಬೇಕು.
ಕ್ಯಾನ್ಸರ್, ಹೃದಯಬೇನೆ ಸೇರಿದಂತೆ ಯಾವುದೇ ತೀವ್ರ ರೀತಿಯ ಕಾಯಿಲೆಗಳಿಂದ ಬಳಲುವವರಿಗೆ ಚಿಕಿತ್ಸೆ ಪಡೆಯಲು ತೊಂದರೆಯಾಗದಂತೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಇದೆ ವೇಳೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಜಿಪಂ ಸಿಇಓ ಗ್ಯಾನೇಂದ್ರಕುಮಾರ ಗಂಗವಾರ ಮತ್ತು ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ಇತರರು ಇದ್ದರು.
Be the first to comment