ಜೀಲ್ಲಾ ಸುದ್ದಿಗಳು
ಅಂಬಿಗ ನ್ಯೂಸ್ ಸುರಪುರ
ಪಶುಸಂಗೋಪನೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಛ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ ಚವ್ಹಾಣ ರವರು ಸುರಪುರ ನಗರಕ್ಕೆ ಆಗಮಿಸಿ ಸುರಪುರ ತಾಲೂಕ ಪಂಚಾಯತ್ ಕಚೇರಿಯಲ್ಲಿ #Covid19 ಸೋಂಕು ಹರಡದಂತೆ ತಾಲ್ಲೂಕು ಆಡಳಿತ ತೆಗೆದುಕೊಂಡಿರುವ ವಿವಿಧ ಮುನ್ನೆಚ್ಚರಿಕೆಯ ಕ್ರಮಗಳ ಕುರಿತು ಪರಿಶೀಲನಾ ಸಭೆ ನಡೆಸಿದರು*
*ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದ ಅವರು ತಾಲೂಕಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದರಿಂದ ಹಿಡಿದು , ಹೋಂ ಕ್ವಾರಂಟೈನ್, ಆಸ್ಪತ್ರೆಗಳಲ್ಲಿ ಐಸೋಲೇಶನ್ ವಾರ್ಡ್ನಲ್ಲಿರುವರ ಆರೋಗ್ಯದ ಮೇಲೆ ಸೂಕ್ತ ನಿಗಾ ವಹಿಸಬೇಕು.
ಕೊರೊನಾ ಹೊರತು ಪಡಿಸಿ ಸಾಮಾನ್ಯ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು
ಇದೇ ಸಂದರ್ಭದಲ್ಲಿ
ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ನರಸಿಂಹ ನಾಯಕ ರಾಜುಗೌಡ ತಾಲೂಕು ಆರೋಗ್ಯಾಧಿಕಾರಿ
ಡಾ. ವೆಂಕಪ್ಪ ನಾಯಕ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ, ತಹಶೀಲ್ದಾರ್ ನಿಂಗಣ್ಣ ಬಿರಾದಾರ್, ಹುಣಸಗಿ ತಹಶಿಲ್ದಾರ್ ವಿನಯ ಕುಮಾರ್ ಪಾಟೀಲ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು*
Be the first to comment