ಜೀಲ್ಲಾ ಸುದ್ದಿಗಳು
ಅಂಬಿಗ ನ್ಯೂಸ್ ಯಾದಗಿರಿ
ಯಾದಗಿರಿ ಜಿಲ್ಲೆಯಲ್ಲಿ ನಿರ್ಗತಿಕರಿಗೆ ಮತ್ತು ಬಡವರಿಗೆ ವಿತರಿಸುವ ಪಡಿತರದಲ್ಲಿ ಅವ್ಯವಹಾರ ನಡೆಸಿರುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳುವುದಲ್ಲದೆ, ಪ್ರಕರಣ ದಾಖಲಾಗಿಸಲಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ಸುರಪುರ: ಬಡ ಮತ್ತು ನಿರ್ಗತಿಕರಿಗೆ ನೀಡಲಾಗುವ ಪಡಿತರದಲ್ಲಿ ಅಕ್ರಮ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಎಚ್ಚರಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಈ ರೀತಿ ಖಡಕ್ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ವಿದ್ಯುತ್ ಕಡಿತ ಮಾಡಬೇಡಿ. ಖಾಸಗಿ ಆಸ್ಪತ್ರೆಗಳನ್ನು ಕಡ್ಡಾಯವಾಗಿ ತೆಗೆಯುವಂತೆ ಕ್ರಮ ವಹಿಸಲು ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿನ ಚರಂಡಿ ಸ್ವಚ್ಛಗೊಳಿಸಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು.
ಜಿಲ್ಲೆಯಲ್ಲಿ ಲಾಕ್‌ಡೌನ್ ವಿಫಲವಾಗಿದೆ, ಲಾಕ್‌ಡೌನ್ ಪಾಲನೆಗೆ ಕಟ್ಟುನಿಟ್ಟಾಗಿ ದಿಟ್ಟ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ರಾಜುಗೌಡ ಮಾತನಾಡಿ, ಜನರಿಗೆ ವಿತರಿಸುವ ಪಡಿತರದಲ್ಲಿ ಅವ್ಯವಹಾರ ನಡೆಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಅಂತಹ ಅಂಗಡಿಗಳನ್ನು ಅಮಾನತುಗೊಳಿಸಿ, ಸೆಕ್ಷನ್ 420 ಅಡಿ ಪ್ರಕರಣ ದಾಖಲಿಸುವುದಾಗಿ ಹಾಗೂ ತಾಲೂಕಿನ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಪುರಸಭೆ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಇದ್ದರು.
Be the first to comment