ಲಿಂಗತ್ವ ಅಲ್ಪಸಂಖ್ಯಾತರಿಗೆ ಆಹಾರ ಸಾಮಗ್ರಿ ವಿತರಣೆ

ವರದಿ:- ಚಂದ್ರಕಾಂತ ಹಳ್ಳಿಖೇಡಕರ್ ಬೀದರ್.

ಜೀಲ್ಲಾ ಸುದ್ದಿಗಳು

ಬೀದರ್ .ಕೊವಿಡ್-19 ಹಿನ್ನೆಲೆಯಲ್ಲಿ ಸರಕಾರದ ಹಾಗೂ ಜಿಲ್ಲಾಧಿಕಾರಿಯವರ ಆದೇಶದಂತೆ

ಜಿಲ್ಲೆಯ ವಿವಿಧೆಡೆಯಲ್ಲಿನ
ಲಿಂಗತ್ವ ಅಲ್ಪ ಸಂಖ್ಯಾತರಿಗೆ ಇತ್ತೀಚೆಗೆ ಆಹಾರ ಸಾಮಗ್ರಿ ವಿತರಿಸಲಾಯಿತು.
ಬಸವಕಲ್ಯಾಣ ತಾಲೂಕಿನಲ್ಲಿನ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಆಹಾರ ಸಾಮಗ್ರಿಗಳನ್ನು ಅಲ್ಲಿನ ಸಿ.ಎಮ್.ಸಿ ಕಛೇರಿಯಿಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಮಹಿಳಾ ಶಕ್ತಿ ಕೇಂದ್ರದ ಸಿಬ್ಬಂದಿಯವರು ವಿತರಿಸಿದರು.
ಅದೇ ರೀತಿ ಹುಮನಾಬಾದ್ ತಾಲೂಕಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಅಲ್ಲಿನ ತಹಸಿಲ್ದಾರ್ ಅವರು ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಿದರು.
ಇದೆ ವೇಳೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
ಒಟ್ಟು ಎರಡು ತಾಲೂಕಿನಲ್ಲಿ 33 ಜನ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಗಿದೆ.

Be the first to comment

Leave a Reply

Your email address will not be published.


*