ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ

ವರದಿ:- ಚಂದ್ರಕಾಂತ ಹಳ್ಳಿಖೇಡಕರ್ ಬೀದರ್.

ಜೀಲ್ಲಾ ಸುದ್ದಿಗಳು

ಕಂಟೈನಮೆಂಟ್ ಪ್ರದೇಶದಲ್ಲಿ ಜೀವನಾವಶ್ಯಕ ವಸ್ತುಗಳ ಸರಬರಾಜು ಸಮರ್ಪಕ ನಡೆಯಲಿ

ಬೀದರ್ .ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಸಾರ್ವಜನಿಕರಿಗೆ ಕಿರಾಣಿ, ತರಕಾರಿ, ಹಾಲು ಮತ್ತು ಹಣ್ಣು ಸೇರಿದಂತೆ ಅಗತ್ಯ ವಸ್ತುಗಳನ್ನು ಸಮರ್ಪಕ ಪೂರೈಕೆ ಮಾಡುವುದರ ಕುರಿತು ರಚಿಸಿರುವ ತಂಡಗಳ ಕಾರ್ಯವೈಖರಿಯ ಬಗ್ಗೆ ಪರಿಶೀಲನೆ ನಡೆಸಲು ಬೀದರ್ ಸಹಾಯಕ ಆಯುಕ್ತರಾದ ಅಕ್ಷಯ್ ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ನಗರದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಏಪ್ರಿಲ್ 18ರಂದು ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಆಯುಕ್ತರು, ಒಂದರಿಂದ 15, 25 ಮತ್ತು 32 ಸೇರಿದಂತೆ ಒಟ್ಟು 17 ವಾರ್ಡುಗಳಲ್ಲಿ ಸಾರ್ವಜನಿಕರಿಗೆ ಯಾವುದೇ ಅಗತ್ಯ ವಸ್ತುಗಳ ಸರಬರಾಜಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳ ತಂಡಕ್ಕೆ ಸಹಾಯಕ ಆಯುಕ್ತರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಕೆಲವು ವಾರ್ಡಗಳಲ್ಲಿ ಹಾಲು, ಕಿರಾಣಿ, ತರಕಾರಿ ಸರಬರಾಜಿನಲ್ಲಿ ತೊಂದರೆ ಆಗುತ್ತಿದೆ ಎನ್ನುವ ದೂರುಗಳು ಕೇಳಿಬರುತ್ತಿವೆ. ಇದು ಕೊನೆಯಾಗಬೇಕು. ತಂಡದಲ್ಲಿರುವ ಎಲ್ಲರೂ ತಮ್ಮ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಜನರಿಗೆ ಇರುವ ಜೀವನಾವಶ್ಯಕ ಸಾಮಗ್ರಿಗಳನ್ನು ಅವರ ಮನೆಮನೆಗೆ ತಲುಪಿಸುವ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಮಾಡಬೇಕು ಎಂದು ಇದೇ ವೇಳೆ ನಗರಸಭೆಯ ಪೌರಾಯುಕ್ತರಾದ ಬಸಪ್ಪ ಅವರು ತಂಡದಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಿದರು.
ಕಂಟೋನ್ಮೆಂಟ್ ಏರಿಯಾದಲ್ಲಿ ಇರುವ ಜನರ ಬೇಡಿಕೆಯಂತೆ ಕೇಬಲ್ ಟಿವಿ ದುರಸ್ತಿ ಮತ್ತು ಸಂಪರ್ಕ ನೀಡುವವರಿಗೆ ಕೂಡ ಪಾಸುಗಳನ್ನು ನೀಡಿದಲ್ಲಿ ಜನರಿಗೆ ಅನುಕೂಲವಾಗಲಿದೆ ಎಂದು ಇದೇ ವೇಳೆ ಕೆಲವರು ಸಹಾಯಕ ಆಯುಕ್ತರಲ್ಲಿ ಕೋರಿದರು.
ಸಭೆಯಲ್ಲಿ ನಾಡ ತಹಸೀಲ್ದಾರ್, ಕಂದಾಯ ನಿರೀಕ್ಷಕರು, ತಾಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಇತರರು ಇದ್ದರು.

Be the first to comment

Leave a Reply

Your email address will not be published.


*